ಕಾರವಾರ:- ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ ಆಗಿದ್ದು, 26ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಜರುಗಿದೆ.
ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ. ಮೈಸೂರಿನ ಪವನ್ (15) ಮೃತ ಬಾಲಕ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.
ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಬಸ್ ಸುಳೆ ಮುರ್ಕಿ ಕ್ರಾಸ್ ಬಳಿ ಬಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



