HomeBengaluru Newsಯಾವುದೇ ಕಾರಣಕ್ಕೂ ಶಾಲೆ ಸಮಯ ಬದಲಾಗದು: ಹೈಕೋರ್ಟ್’ಗೆ ವರದಿ ಸಲ್ಲಿಸಿದ ಸರ್ಕಾರ

ಯಾವುದೇ ಕಾರಣಕ್ಕೂ ಶಾಲೆ ಸಮಯ ಬದಲಾಗದು: ಹೈಕೋರ್ಟ್’ಗೆ ವರದಿ ಸಲ್ಲಿಸಿದ ಸರ್ಕಾರ

For Dai;y Updates Join Our whatsapp Group

Spread the love

ಬೆಂಗಳೂರು:-  ಯಾವುದೇ ಕಾರಣಕ್ಕೂ ಶಾಲೆ ಸಮಯ ಬದಲಾಗದು ಎಂದು ಬೆಂಗಳೂರು ಹೈಕೋರ್ಟ್‍ಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಿಸುವ ಸಲುವಾಗಿ ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವ ಕುರಿತು ಹೈಕೋರ್ಟ್ ಸಲಹೆ ನೀಡಿತ್ತು. ಇದಕ್ಕೆ ಬಂಧಿಸಿದಂತೆ ರಾಜ್ಯ ಸರಕಾರ ಶಾಲಾ ಸಮಯ ಬದಲಾವಣೆ ಮಾಡಲು ಆಗುವುದಿಲ್ಲ ಎಂದು ಹೈಕೋರ್ಟ್‍ಗೆ ವರದಿ ನೀಡಿದೆ.

ಬಳ್ಳಾರಿ ರಸ್ತೆ ವಿಸ್ತರಣೆ ಕುರಿತಂತೆ ಸಮರ್ಪಣಾ ಸಾಂಸ್ಕೃತಿಕ ಮತ್ತು ಸಮಾಜ ಸೇವಾ ಸಂಘಟನೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ವಿಚಾರಣೆ ನಡೆಸಿತು. ಬೆಂಗಳೂರು ನಗರದ ವಾಹನದಟ್ಟಣೆಯು ಕೇವಲ ಶಾಲಾ ಸಮಯದ ಕಾರಣದಿಂದ ಆಗಿರುವುದಿಲ್ಲ.ಸಂಚಾರದಟ್ಟಣೆಯ ಒಟ್ಟಾರೆ ವಾಹನಗಳ ಬಳಕೆ ವಿವಿಧ ಕಚೇರಿಗಳು, ಕೈಗಾರಿಕೆಗಳು ಮತ್ತು ಇತರೆ ಸ್ಥಳಗಳಿಗೆ ತೆರಳುವ ವಾಹನಗಳಿಂದ ಉಂಟಾಗುತ್ತದೆ ಎಂದು ಸರಕಾರ ಹೈಕೋರ್ಟ್‍ಗೆ ತಿಳಿಸಿದೆ.

ವಾಹನದಟ್ಟಣೆಯನ್ನು ತಪ್ಪಿಸಲು ಶಾಲೆಗಳನ್ನು ಬೇಗನೆ ಆರಂಭಿಸಿದಲ್ಲಿ ಮಕ್ಕಳಿಗೆ ನಿದ್ರೆ, ಊಟ, ಉಪಚಾರ ನಿಗದಿತ ವೇಳೆಯಲ್ಲಿ ಆಗದೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಹೀಗಾಗಿ, ಹಲವು ಆಯಾಮಗಳಲ್ಲಿ ನೋಡುವುದಾದಲ್ಲಿ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಅಗತ್ಯವಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!