ಗದಗ: ಶಾಲೆ ಆರಂಭದ ದಿನವೇ ಸ್ಕೂಲ್ ವಾಹನ ಪಲ್ಟಿಯಾಗಿ ಚಾಲಕನಿಗೆ ಗಾಯಗಳಾಗಿರುವ ಘಟನೆ ಗದಗ ನಗರದ RK ನಗರ ಸಮೀಪ ಅಂಡರ್ ಪಾಸ್ ನಲ್ಲಿ ನಡೆದಿದೆ.
ಶ್ರೀ ಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸೇರಿದ ಬಸ್ ಆಗಿದ್ದು, ಮಕ್ಕಳನ್ನು ಕರೆತರಲು ಹೊರಟಿದ್ದ ಶಾಲೆ ವಾಹನಕ್ಕೆ ಮಿನಿ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಕ್ರೇನ್ ಮೂಲಕ ವಾಹನ ತೆರವು ಮಾಡಲಾಗಿದ್ದು, ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



