ತಿಮ್ಮಾಪೂರದಲ್ಲಿ ಕುಡಿಯುವ ನೀರಿಗಾಗಿ ಪರದಾಟ

0
Scramble for drinking water in Thimmapur
Spread the love

ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕಳೆದ ಎರಡು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಪಕ್ಕದ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಿಂದ ಟ್ಯಾಂಕರ್ ಮೂಲಕ ತಿಮ್ಮಾಪೂರ ಗ್ರಾಮ ಪಂಚಾಯಿತಿ ಅಧಿಕಾರಿಗಳು ನೀರನ್ನು ಪೂರೈಕೆ ಮಾಡುತ್ತಿದ್ದಾರೆ.

Advertisement

ಈ ನೀರು ಫೋರೊವೆಡ್ ಇದ್ದರೂ ಸಹ ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದೇ ನೀರನ್ನು ಪೂರೈಕೆ ಮಾಡುತ್ತಿದ್ದು, ಈ ನೀರನ್ನು ಕುಡಿಯುವುದರಿಂದ ಗ್ರಾಮಸ್ಥರಿಗೆ ವಾಂತಿ-ಕಾಲರಾ ಇತ್ಯಾದಿ ಖಾಯಿಲೆಗಳು ಹರಡುವ ಸಾಧ್ಯತೆಗಳವೆ ಎಂದು ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ, ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ಗ್ರಾಮಸ್ಥರ ಸ್ಥಿತಿ-ಗತಿಯನ್ನು ಖುದ್ದಾಗಿ ಬಂದು ಪರಿಶೀಲಿಸಿ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ರೈತ ಸಂಘದ ಕಾರ್ಯಕರ್ತರಾದ ಬಾಳವ್ವ ಸೊಂಟಿ, ನಿಂಬವ್ವ ವಣಿಗೇರಿ, ರೇಣವ್ವ ತಳವಾರ, ನಿಂಗವ್ವ ಖುಷಿ ಸೇರಿದಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here