HomeBelgaumಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ SDC

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ SDC

For Dai;y Updates Join Our whatsapp Group

ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಪಹಣಿ ಪತ್ರ ಮಾಡಿಕೊಡಲು ಲಂಚಕ್ಕೆ ಕೈಯೊಡ್ದಿದ್ದ ಎಸ್ ಡಿಸಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ.

ಮಂಜುನಾಥ್ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್ ಡಿಸಿ, ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್‌.ಕೆ. ಗ್ರಾಮದ ರವಿ ಅಜ್ಜಿ ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು.

ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ರವಿ ಅಜ್ಜಿ ಬೆಳಗಾವಿ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ  ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಮಂಜುನಾಥ್​​ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ SP ಹಣಮಂತರಾಯ, DYSP ಬಿ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ PSI ಅನ್ನಪೂರ್ಣ ಹುಲಗೂರ ನೇತೃತ್ವದ ತಂಡ ದಾಳಿ ನಡೆಸಿತ್ತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img