ವಿಜಯಸಾಕ್ಷಿ ಸುದ್ದಿ, ಗದಗ : ಶಾಲಾಭಿವೃದ್ಧಿ ಮತ್ತು ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಪಾತ್ರ ಮಹತ್ವದ್ದಾಗಿದೆ ಎಂದು ಮುಖ್ಯ ಶಿಕ್ಷಕ ಮಲ್ಲೇಶ ಡಿ.ಎಚ್ ಹೇಳಿದರು.
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಡವಿಸೋಮಾಪೂರ ಸಣ್ಣ ತಾಂಡೆ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಮೇಲುಸ್ತುವಾರಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿ, ಶಾಲಾ ಮೂಲ ಸೌಕರ್ಯ ಹೆಚ್ಚಿಸುವುದು, ಅನಿಯಮಿತ ಗೈರು ಹಾಜರಿ, ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಕರೆತರುವ ಪ್ರಯತ್ನ ಮಾಡುವುದು, ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಎಸ್‌ಡಿಎಂಸಿ ಹಾಗೂ ಸಮುದಾಯದ ಜವಾಬ್ದಾರಿ ಮಹತ್ವದ್ದಾಗಿದೆ ಎಂದರು.
ಶಿಕ್ಷಕರಾದ ಎಸ್.ಜಿ. ಅಮ್ಮಿನಭಾವಿ, ಎಸ್‌ಡಿಎಂಸಿ ಕಾರ್ಯ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಎಸ್.ಟಿ. ಹಳಕಟ್ಟಿ, ಪಿ.ಬಿ. ಕಿಲಬನವರ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಾರುತಿ ಪವಾರ, ಗ್ರಾ.ಪಂ ಸದಸ್ಯ ವೆಂಕಟೇಶ್ ಲಮಾಣಿ, ಲಚ್ಚಪ್ಪ ಲಮಾಣಿ, ಸೋಮನಾಥ ಲಮಾಣಿ, ಮೌನೇಶ್ ಲಮಾಣಿ, ಬಿಸಿಯೂಟ ಸಿಬ್ಬಂದಿಗಳಾದ ಗಂಗವ್ವ ಲಮಾಣಿ, ಸಾವಿತ್ರಿ ರಾಠೋಡ, ದೇವಕ್ಕ ಲಮಾಣಿ, ಲಕ್ಷ್ಮಿ ಲಮಾಣಿ, ಮೀರವ್ವ ಪವಾರ, ಶಾಂತವ್ವ ರಾಠೋಡ, ರೇಣುಕಾ ಲಮಾಣಿ, ಗೀತಾ ರಾಠೋಡ, ಶಾಲಾ ಮಕ್ಕಳು ಇದ್ದರು.