ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸಂಸ್ಥಾಪನಾ ದಿನದ ಅಂಗವಾಗಿ ಶಿರಹಟ್ಟಿ ತಾಲೂಕಿನ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಶಿರಹಟ್ಟಿ ನಗರದಲ್ಲಿ ಪಕ್ಷದ ಕಚೇರಿ ಉದ್ಘಾಟನೆ ಹಾಗೂ ಪಕ್ಷದ ಧ್ವಜಾರೋಹಣ ಕಾರ್ಯಕ್ರಮವನ್ನು ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ಕಾಗದಗಾರ ಹಾಗೂ ರಾಜ್ಯ ಸಮಿತಿ ಸದಸ್ಯರು ಜಿಲ್ಲಾ ಉಸ್ತುವಾರಿಗಳಾದ ರಮಜಾನ ಕಡಿವಾಲ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಖ್ಯಾತ ವಕೀಲ ಎ.ಎ. ಬೇವಿನಗಿಡದ, ಹಾಜಿ ರಿಯಾಜ್ ಢಾಲಾಯತ, ಹಾಜಿ ನಜೀರ್‌ಸಾಬ್ ಬುವಾಜಿ, ಗೌಸ್ ಪೀರ್ ಮಕಾನದಾರ, ದಾವಲ್‌ಸಾಬ್ ಢಾಲಯತ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಮುಜಾಮ್ಮಿಲ್ ಮಕಾನದಾರ, ಪ್ರಧಾನ ಕಾರ್ಯದರ್ಶಿ ದಾದಾಪೀರ್ ಢಾಲಾಯತ, ಕಾರ್ಯದರ್ಶಿ ಹಜರತ್ ಅಲಿ ತಹಸೀಲ್ದಾರ್, ಖಜಾಂಚಿ ಇಜಾಜ್ ಅಹ್ಮದ್ ಮಕಾನದಾರ ಹಾಗೂ ಸಮಿತಿಯ ಸರ್ವ ಸದಸ್ಯರು, ಕಾರ್ಯಕರ್ತರು, ಹಿತೈಷಿಗಳು ಪಾಲ್ಗೊಂಡಿದ್ದರು.