ವಿಜಯಸಾಕ್ಷಿ ಸುದ್ದಿ, ಗದಗ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗದಗ ಜಿಲ್ಲಾ ಸಮಿತಿ ಸಭೆಯು ಜಿಲ್ಲಾ ಕಛೇರಿಯಲ್ಲಿ ಇತ್ತೀಚೆಗೆ ಜರುಗಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹಾಗೂ ಜಿಲ್ಲಾ ಉಸ್ತುವಾರಿ ರಂಜಾನ್ ಕಡಿವಾಳರ ಉಪಸ್ಥಿತಿಯಲ್ಲಿ ನಡೆದ ಸಭೆ ಮತ್ತು ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂಬ ಬಗ್ಗೆ ಸಮಿತಿಯ ನಿಲುವಿನ ಕುರಿತು ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಲಾಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಪ್ಸರ್ ಕೊಡ್ಲಿಪೇಟೆ, ಇದುವರೆಗೆ ಆಯ್ಕೆಯಾದ ಜನಪ್ರತಿನಿಧಿಗಳು ಬಂದ ಅನುದಾನ ಖರ್ಚು ಮಾಡಿದ್ದಾರೆಯೇ ಹೊರತು ಹೊಸ ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧ್ಯಕ್ಷರಾದ ಬಿಲಾಲ್, ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಸಮಿತಿ ಸದಸ್ಯ ರಂಜಾನ್ ಕಡಿವಾಳ್, ಮಾತನಾಡಿ, ಮುಂದಿನ ದಿನಗಳಲ್ಲಿ ಗುಲಾಮಿ ರಾಜಕೀಯದಿಂದ ಮುಕ್ತಿ ಪಡೆಯಲು, ಘನತೆಯ ರಾಜಕೀಯಕ್ಕಾಗಿ ಎಎಸ್‌ಡಿಪಿಐ ಪಕ್ಷವನ್ನು ಬಲಪಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಅನ್ವರ್ ಬಾಗೇವಾಡಿ, ಉಪಾಧ್ಯಕ್ಷ ಹಿದಾಯತುಲ್ಲಾ ಕಾಗದಗಾರ್, ಕಾರ್ಯದರ್ಶಿ ಇರ್ಫಾನ್ ಗುಲಗುಂದಿ, ಖಜಾಂಚಿ ಮುಜಾಹಿದ್ ಕಣಕೇನ್ನವರ್, ಜಿಲ್ಲಾ ಸದಸ್ಯರಾದ ಹಸ್ಸನ ನಾಗನೂರ್, ಅಬ್ದುಲ್, ಅನ್ವರ್ ಮುಲ್ಲಾ, ಮುಸ್ತಾಕ್ ಸಾಬ್ ಹೊಸಮನಿ, ವಾರ್ಡಿನ ಅಧ್ಯಕ್ಷರು, ಕಾರ್ಯದರ್ಶಿಗಳು ಮುಂತಾದವರಿದ್ದರು.