ವಿಜಯಸಾಕ್ಷಿ ಸುದ್ದಿ, ಗದಗ: ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಹೇಳುವುದು ಪ್ಯಾಷನ್ ಆಗಿದೆ ಎಂಬ ಕೇಂದ್ರ ಗೃಹ ಸಚಿವರ ಹೇಳಿಕೆ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿ ನಗರದಲ್ಲಿ ಗದಗ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಸಮಾವೇಶಗೊಂಡ ಪಕ್ಷದ ಕಾರ್ಯಕರ್ತರು, ಗೃಹಸಚಿವರ, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದಲಿತ ಸಂಘರ್ಷ ಸಮಿತಿಯ ಮುಖಂಡ ವೆಂಕಟೇಶ್ ಹಾಗೂ ಬಳಗದವರು ಕ್ರಾಂತಿ ಗೀತೆ ಹಾಡುವುದರ ಮೂಲಕ ಯುವಕರಿಗೆ ಸ್ಪೂರ್ತಿ ನೀಡಿದರು.
ಹೋರಾಟವನ್ನು ಉದ್ದೇಶಿಸಿ ಅನ್ವರ್ ಬಾಗೇವಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿಲಾಲ್ ಗೋಕಾವಿ, ಉಪಾಧ್ಯಕ್ಷ ಹಿದಾಯತುಲ್ಲಾ ಕಾಗದಗಾರ, ಅಫ್ಫಾನ್ ತರಫ್ದರ್, ಸಾಮಾಜಿಕ ಹೋರಾಟಗಾರ ರಫೀಕ್ ಧಾರವಾಡ, ಮುಸ್ತಾಕ್ ಕಟ್ಟಿಮನಿ, ಹಸ್ಸನ್ ನಾಗನೂರ್, ಮುಸ್ತಾಕ್ ಹೊಸಮನಿ, ಸಮೀರ್ ಕೊಟ್ಟೂರ್ ಮುಂತಾದವರು ಹಾಜರಿದ್ದರು.



