ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ- 2 ಫಲಿತಾಂಶ ಪ್ರಕಟ: ಶೇ.31.27ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ಇತ್ತೀಚೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು ಪ್ರಕಟಗೊಂಡಿದೆ. ಪರೀಕ್ಷೆಯಲ್ಲಿ ಶೇ.31.27ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Advertisement

ಎಸ್, ಪಿಯುಸಿ ಪರೀಕ್ಷೆ-2ರ ಫಲಿತಾಂಶವು ಇಂದು ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಶೇ.31.27ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 1,94,077 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 60,692 ಮಂದಿ ಉತ್ತೀರ್ಣರಾಗಿದ್ದಾರೆ. 1,33,385 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಈ ಮೂಲಕ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು ಫಲಿತಾಂಶ ಶೇ.77.96ಕ್ಕೆ ಏರಿಕೆಯಾಗಿದೆ.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಏ.24 ರಿಂದ ಮೇ 8 ರವರೆಗೆ ಪರೀಕ್ಷೆ ನಡೆಸಿತ್ತು. 1,94,077 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರೆ 60,692 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಫಲಿತಾಂಶ ಸುಧಾರಣೆಗೆ 71,964 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಈ ಪೈಕಿ 41,719 ವಿದ್ಯಾರ್ಥಿಗಳು ಅಂಕ ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳು www. karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.


Spread the love

LEAVE A REPLY

Please enter your comment!
Please enter your name here