HomeGadag Newsದ್ವಿತೀಯ ಪಿಯುಸಿ ಪರೀಕ್ಷೆ ಸುಗಮ

ದ್ವಿತೀಯ ಪಿಯುಸಿ ಪರೀಕ್ಷೆ ಸುಗಮ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಶನಿವಾರದಿಂದ ಪ್ರಾರಂಭವಾಗಿದ್ದು, ಯಾವುದೇ ಅಹಿತಕರ ಘಟನೆಗಳಿಲ್ಲದೆ ಸುಸೂತ್ರವಾಗಿ ಜರುಗಿದವು.

ಪಟ್ಟಣದ ಬಿಸಿಎನ್ ಸಂಸ್ಥೆಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಾಗೂ ಸರಕಾರಿ ಪ.ಪೂ ಕಾಲೇಜಿನ ಪರೀಕ್ಷಾ ಕೇಂದ್ರಗಳಿದ್ದು, ಪರೀಕ್ಷಾ ವಿಭಾಗದ ಅಧೀಕ್ಷಕರು ಸೇರಿದಂತೆ ವಿವಿಧ ಸಿಬ್ಬಂದಿಗಳೊಂದಿಗೆ ಪರೀಕ್ಷಾ ಕೇಂದ್ರದಲ್ಲಿ ಸಕಲ ಸಿದ್ದತೆಗಳೊಂದಿಗೆ ಪರೀಕ್ಷೆಗಳನ್ನು ಯಶಸ್ವಿಯಾಗಿ ನಿಭಾಯಿಸಲಾಗುತ್ತಿದೆ.

ಪಟ್ಟಣದ ಬಿಸಿಎನ್ ಪದವಿಪೂರ್ವ ಮಹಾವಿದ್ಯಾಲಯದಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ನಡೆದ ಪ್ರಥಮ ಭಾಷೆ ಕನ್ನಡ ವಿಷಯಕ್ಕೆ ಒಟ್ಟು 476 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 464 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಈ ಪರೀಕ್ಷಾ ಕೇಂದ್ರದಲ್ಲಿ ಪುರಸಭೆ ಪ.ಪೂ ಕಾಲೇಜ್, ಎಸ್‌ಎಂ.ಜೆ.ವ್ಹಿ ಪ.ಪೂ ಕಾಲೇಜ್‌ಗಳ ವಿದ್ಯಾರ್ಥಿಗಳು ಮತ್ತು ಸರಕಾರಿ ಪ.ಪೂ ಕಾಲೇಜ್‌ಗಳ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಇಲ್ಲಿ ಜಾನಾನಾಯಕ್ ಮುಖ್ಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನೊಂದು ಪರೀಕ್ಷಾ ಕೇಂದ್ರವಾದ ಸರಕಾರಿ ಪ.ಪೂ ಕಾಲೇಜನಲ್ಲಿ ಬಿ.ಸಿ.ಎನ್ ಪ.ಪೂ ಕಾಲೇಜ್ ಹಾಗೂ ಶಿಗ್ಲಿಯ ಸರಕಾರಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಈ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ಇಲ್ಲಿ 380 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು 350 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಈ ಕೇಂದ್ರಕ್ಕೆ ಮಂಜುನಾಥ ಕೊಕ್ಕರಗುಂದಿ ಮುಖ್ಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಾಚಾರ್ಯ ಡಿ.ಎಸ್. ಪ್ಯಾಟಿ ಹಾಜರಿದ್ದರು. ಅಧಿಕಾರಿಗಳಾದ ಮಹೇಶ ಹಡಪದ, ಜಿಲ್ಲಾ ಜಾಗೃತ ದಳದ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಕೇಂದ್ರದಲ್ಲಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!