ಬೆಂಗಳೂರು:- ಇಂದಿನಿಂದ ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ 7,13,812 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸಬರು 6,61,474, ಪುನರಾವರ್ತಿತ 34,071, ಹಾಗೂ 18,317 ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಎಲ್ಲ ಪರೀಕ್ಷಾ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್, ಎಲೆಕ್ಟ್ರಾನಿಕ್ ವಾಚ್, ಕ್ಯಾಲ್ಕುಲೇಟರ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಜೆರಾಕ್ಸ್ ಅಂಗಡಿಗಳಿಗೆ ನಿರ್ಬಂಧಿಸಲಾಗಿದೆ. ಮತ್ತು ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.