ವಿಜಯಸಾಕ್ಷಿ ಸುದ್ದಿ, ಮುಳಗುಂದ : ಪಟ್ಟಣದ ಕನಕದಾಸ ಶಿಕ್ಷಣ ಸಮಿತಿಯ ಕೆ.ಎಸ್.ಎಸ್. ಸಂಯುಕ್ತ ಪದವಿಪೂರ್ವ ಮಾಹಾವಿದ್ಯಾಲಯದ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ನೀಲಾ ನೆರೆಗಲ್ಲ 545 ಅಂಕ ಪಡೆದು ಪ್ರಥಮ ಸ್ಥಾನ, ಲಕ್ಷ್ಮಿ ಯಲಿಗಾರ 542 ಅಂಕ ಪಡೆದು ದ್ವಿತೀಯ ಸ್ಥಾನ, ಪ್ರತಿಭಾ ಹಳ್ಯಾಳ 527 ಅಂಕ ಪಡೆದು ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
Advertisement
ಮಾಹಾವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಲಕ್ಷ್ಮಿ ಬಂಗಾರಿ 538 ಅಂಕ ಪಡೆದು ಪ್ರಥಮ ಸ್ಥಾನ, ಹನಮಂತ ಮುಳಗುಂದ 504 ಅಂಕ ಪಡೆದು ದ್ವಿತೀಯ ಸ್ಥಾನ, ಭಾರತಿ ಹಕಾರಿ 501 ಅಂಕ ಪಡೆದು ತೃತೀಯ ಸ್ಥಾನ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.