ಉಡುಪಿ: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಣಿಪಾಲ ಸಮೀಪದ ಹಿರಿಯಡ್ಕ ಬಳಿ ನಡೆದಿದೆ. ನಯನ (17) ಆತ್ಮಹತ್ಯೆಗೆ ಶರಣಾದ ದುರ್ಧೈವಿಯಾಗಿದ್ದು, ಪೆರ್ಡೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾಳೆ.
ಮನೆಯ ಉಪ್ಪರಿಗೆ ಮಾಡಿದ ಜಂತಿಗೆ ಚೂಡಿದಾರದ ಶಾಲು ಕಟ್ಟಿ ನೇಣಿಗೆ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



