ಚಿಕ್ಕಮಗಳೂರು:– ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ.
ಸುಶಾಂತ್ ಮೃತ ವಿದ್ಯಾರ್ಥಿ. ಮೃತ ಸುಶಾಂತ್ ಹರಿಹರಪುರ ಹೋಬಳಿಯ ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ತಾಳ್ ಗ್ರಾಮದ ನಿವಾಸಿ ಎನ್ನಲಾಗಿದೆ. ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಬೆಳಿಗ್ಗೆ ಮನೆಯಲ್ಲಿ ಯಾರಿಗೂ ತಿಳಿಯದಂತೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬದವರು ಗಮನಿಸಿದ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ವಿದ್ಯಾಭ್ಯಾಸದಲ್ಲಿ ಪ್ರತಿಭಾನ್ವಿತನಾಗಿದ್ದ ಈತನ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಓದಿನ ಒತ್ತಡ ಕಾರಣವೇ ಅಥವಾ ಬೇರೆ ಯಾವುದೇ ವೈಯಕ್ತಿಕ ಕಾರಣ ಇದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.