ಲೋಕಸಭೆಯಲ್ಲಿ ಭದ್ರತಾ ವೈಫಲ್ಯ: ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆ

0
Spread the love

ಮೈಸೂರು: ಕಲಾಪ ನಡೆಯುತ್ತಿದ್ದ ಹೊತ್ತಿನಲ್ಲೇ ಪಾರ್ಲಿಮೆಂಟ್ ಒಳಗೆ ಕಲರ್ ಸ್ಮೋಕ್ ಸಿಡಿಸಿದ ಯುವಕರಿಗೆ ಪ್ರತಾಪ್ ಸಿಂಹ  ಕಚೇರಿಯಿಂದಲೇ ಪಾಸ್ ವಿತರಣೆಯಾಗಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರತಾಪ್ ಸಿಂಹ  ಪ್ರತಿಕ್ರಿಯೆ ನೀಡಿದ್ದಾರೆ. ಕಲಾಪ ವೀಕ್ಷಿಸುತ್ತೇವೆ ಎಂದು ಹೇಳಿ ಯುವಕರು ಪಾಸ್ ಪಡೆದುಕೊಂಡು ಹೋಗಿದ್ದರು ಎಂದು ಅವರು ತಿಳಿಸಿದ್ದಾರೆ.

Advertisement

ಮೈಸೂರು ಮೂಲದ ಮನೋರಂಜನ್ ಹಾಗೂ ಸಾಗರ್‌ ಶರ್ಮಾ ಎಂಬ ಯುವಕರು ಕಲಾಪದ ವೇಳೆ ನುಗ್ಗಿರುವುದು ಎಂದು ತಿಳಿದು ಬಂದಿದೆ. ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಇಬ್ಬರು ವ್ಯಕ್ತಿಗಳು ಮೇಲಿನಿಂದ ಜಿಗಿದಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಇಬ್ಬರನ್ನು ಹಿಡಿದಿದ್ದಾರೆ. ಮೈಸೂರು ಮೂಲದ ಮನೋರಂಜನ್ ಹಾಗೂ ಸಾಗರ್‌ ಶರ್ಮಾ ಎಂಬ ಯುವಕರು ಕಲಾಪದ ವೇಳೆ ನುಗ್ಗಿರುವುದು ಎಂದು ತಿಳಿದು ಬಂದಿದೆ. ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

 


Spread the love

LEAVE A REPLY

Please enter your comment!
Please enter your name here