ಭದ್ರತಾ ಪಡೆ ಕಾರ್ಯಾಚರಣೆ: ಮೂವರು ಲಷ್ಕರ್ ಉಗ್ರರ ಎನ್ಕೌಂಟರ್

0
Spread the love

ಜಮ್ಮು ಕಾಶ್ಮೀರ: ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಭಾರತದಿಂದ ಆಪರೇಷನ್ ಸಿಂದೂರ್‌ ನಡೆಸಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೈಬಾ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

Advertisement

ಈ ಪ್ರದೇಶದಲ್ಲಿ ಮತ್ತೊಬ್ಬ ಭಯೋತ್ಪಾದಕ ಇರುವ ಸಾಧ್ಯತೆ ಇದೆ. ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೊದಲು ಕುಲ್ಗಾಮ್‌ನಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು. ನಂತರ ಕಾರ್ಯಾಚರಣೆ ಶೋಪಿಯಾನ್‌ನ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಗೊಂಡಿತು.

ಸೇನೆ ಮತ್ತು ಅರೆಸೈನಿಕ ಪಡೆಗಳ ಭದ್ರತಾ ಸಿಬ್ಬಂದಿ ಸುಮಾರು 2 ಗಂಟೆಗಳ ಕಾಲ ಭಯೋತ್ಪಾದಕರ ವಿರುದ್ಧ ಹೋರಾಡಿದ್ದಾರೆ. ಗುಪ್ತಚರ ಮಾಹಿತಿಯ ನಂತರ ಭದ್ರತಾ ಪಡೆಗಳು ಭಯೋತ್ಪಾದಕರನ್ನು ತಡೆದಿವೆ.

 


Spread the love

LEAVE A REPLY

Please enter your comment!
Please enter your name here