ಕಲಬುರಗಿ:- ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಭಾನುವಾರ ನಡೆದ ಆರ್‌ಎಸ್ಎಸ್ ಪಥಸಂಚಲನದಲ್ಲಿ ಸರ್ಕಾರಿ ವೈದ್ಯರೊಬ್ಬರು ಭಾಗವಹಿಸಿರುವುದು ವಿವಾದಕ್ಕೆ ಕಾರಣವಾಗಿದೆ.
Advertisement
ಇದಕ್ಕೂ ಮುನ್ನ, ಅಕ್ಟೋಬರ್ 12ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಇದೇ ರೀತಿಯ ಪಥಸಂಚಲನದಲ್ಲಿ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಭಾಗವಹಿಸಿದ್ದಕ್ಕಾಗಿ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ. ಅರುಂಧತಿ ಅವರು ಇಲಾಖಾ ತನಿಖೆ ಕೈಗೊಂಡು ಅಮಾನತು ಆದೇಶ ಹೊರಡಿಸಿದ್ದರು.
ಸರ್ಕಾರಿ ನೌಕರರು ರಾಜಕೀಯ ಅಥವಾ ಸಂಘಟನೆ ಚಟುವಟಿಕೆಯಲ್ಲಿ ಭಾಗವಹಿಸುವುದು ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಆಗುವುದರಿಂದ, ಸೇಡಂ ಪ್ರಕರಣದಲ್ಲಿಯೂ ಇದೇ ರೀತಿಯ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.