• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ಕೆ.ಎಚ್. ಪಾಟೀಲರ ಪ್ರತಿಮೆ ನೋಡಿದರೆ ಅವರ ಹುಟ್ಟು ಹೋರಾಟಗಾರಿಕೆ ನೆನಪಿಗೆ ಬರುತ್ತೆ: ಜಿ. ಪರಮೇಶ್ವರ್!

Vijaya Sakshi News Desk by Vijaya Sakshi News Desk
June 22, 2025
in Politics News
ಕೆ.ಎಚ್. ಪಾಟೀಲರ ಪ್ರತಿಮೆ ನೋಡಿದರೆ ಅವರ ಹುಟ್ಟು ಹೋರಾಟಗಾರಿಕೆ ನೆನಪಿಗೆ ಬರುತ್ತೆ: ಜಿ. ಪರಮೇಶ್ವರ್!
0
SHARES
0
VIEWS
Share on Facebook

ಕೊಪ್ಪಳ:- ಜಿಲ್ಲೆಯ ಕುಕನೂರು ತಾಲ್ಲೂಕಿನ ಶಿರೂರ ಪುನರ್ವಸತಿ ಗ್ರಾಮದಲ್ಲಿ ಮಾಜಿ ಸಚಿವ ದಿ. ಕೆ.ಎಚ್. ಪಾಟೀಲ್ ಅವರ ಮೂರ್ತಿ ಅನಾವರಣ ಕಾರ್ಯಕ್ರಮ ಇಂದು ಜರುಗಿದೆ. ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಗೃಹ ಸಚಿವ ಜಿ. ಪರಮೇಶ್ವರ್ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಿ. ಪರಮೇಶ್ವರ್, ಕೆ.ಎಚ್. ಪಾಟೀಲ್ ಅವರು ತಮ್ಮ ಗೌಡಿಕೆಯನ್ನು ಮೀರಿ ಜನ ಸಮುದಾಯದ ಜೊತೆಗೆ ಗುರುತಿಸಿಕೊಳ್ಳುವುದರ ಜೊತೆಗೆ ಅವರು ಜನರ ಕಷ್ಟಗಳಿಗೆ ಸ್ಪಂದಿಸುವ ಹುಟ್ಟು ಹೋರಾಟಗಾರರಾಗಿದ್ದರು.

ರಾಜಕಾರಣದಲ್ಲಿ ಬಹಳ ವರ್ಷಗಳ ಕಾಲ ಜನ ಸಮುದಾಯದಲ್ಲಿ ಉಳಿದ ಕೆ.ಎಚ್. ಪಾಟೀಲ್ ಅವರ ಮೂರ್ತಿಯನ್ನು ಇಂದು ಸಂತೋಷದಿಂದ ಅನಾವರಣಗೊಳಿಸಿದ್ದೇನೆ. ನಾನು ಮೊದಲ ಬಾರಿ ಶಾಸಕನಾಗಿದ್ದಾಗ ಕೆ.ಎಚ್. ಪಾಟೀಲ್ ಅವರು ಕಂದಾಯ ಸಚಿವರಾಗಿದ್ದರು. ಯುವ ಉತ್ಸಾಹದ ಹೊಸ ಶಾಸಕರನ್ನು ಅವರು ಪ್ರೀತಿಯಿಂದ ಮಾತನಾಡಿಸುವುದರ ಜೊತೆಗೆ ನಮಗೆ ಪ್ರೋತ್ಸಾಹಿಸುತ್ತಿದ್ದರು. ಜನರ ಕಷ್ಟಗಳನ್ನು ದೂರ ಮಾಡುವ ಸಲುವಾಗಿ ಅವರು ಸಹಕಾರಿ ಕ್ಷೇತ್ರ. ಸಾಮಾಜಿಕ. ಆರ್ಥಿಕ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದರು ಎಂದರು. ಮೂರ್ತಿಗಳು ನೋಡಿದಾಗ ಸ್ಪೂರ್ತಿಯಾಗುತ್ತದೆ. ಇಂದಿರಾಗಾಂಧಿ ಅವರ ಮೂರ್ತಿ ನೋಡಿದರೆ ಅವರು ಬಡವರಿಗಾಗಿ ಹಲವಾರು ಯೋಜನೆ ಜಾರಿಗೆ ತಂದರು ಎಂದು ನೆನೆಸುತ್ತವೆ. ಡಿ.ದೇವರಾಜ ಅರಸು ಅವರ ಮೂರ್ತಿ ನೋಡಿದರೆ ಅವರು ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಕೆಲಸ ಮಾಡಿದರು ಎಂಬುದು ಹೇಗೆ ನೆನಪಿಗೆ ಬರುತ್ತದೆಯೋ ಹಾಗೆ ಕೆ.ಎಚ್. ಪಾಟೀಲ್ ಅವರ ಪ್ರತಿಮೆ ನೋಡಿದರೆ ಅವರ ಶಿಸ್ತಿನ ಸಿಪಾಯಿ ಹಾಗೂ ಹುಟ್ಟು ಹೋರಾಟಗಾರಿಕೆ ನೆನಪಿಗೆ ಬರುತ್ತದೆ ಎಂದು ಹೇಳಿದರು.

ಬಳಿಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ. ದೇಶಪಾಂಡೆ ಅವರು ಮಾತನಾಡಿ, ನಾನು ಮತ್ತು ಭೋಸರಾಜು ಅವರು ಕೆ.ಎಚ್ ಪಾಟೀಲ್ ಅವರ ಜೊತೆಗೆ ಕೆಲಸ ಮಾಡಿದ್ದೇವೆ. ಅವರು ಒಳ್ಳೆಯ ಆಡಳಿತಗಾರರಾಗಿದ್ದರು. ಅವರು ಪಾರದರ್ಶಕ ಆಡಳಿತಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದರು. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಅವರು ಮಾಡಿದ್ದಾರೆ. ತಮ್ಮ ಸರಳ ವ್ಯಕ್ತಿತ್ವದ ಜೊತೆಗೆ ಆಡಳಿತದಲ್ಲಿ ಹಿಡಿತ ಉಳ್ಳವರಾಗಿದ್ದರು. ಕೃಷಿ. ಸಹಕಾರ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದರು. ಕೆ.ಎಚ್. ಪಾಟೀಲ್ ಅವರನ್ನು ಹುಲಕೋಟಿಯ ಹುಲಿ ಎಂದೇ ಕರೆಯುತ್ತಿದ್ದರು ಎಂದರು.

ಬಳಿಕ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಮಾತನಾಡಿ, ಶಿರೂರ ಗ್ರಾಮದಲ್ಲಿ ಕೆ.ಹೆಚ್.ಪಾಟೀಲ್ ಅವರ ಮೂರ್ತಿಯನ್ನು ಸುಂದರವಾಗಿ ಪ್ರತಿಷ್ಠಾಪನೆ ಮಾಡಿರುವುದು ನನಗೆ ಸಂತಸ ತಂದಿದೆ. ಹತ್ತಿ ಮಾರುವುದಕ್ಕಾಗಿ ರೈತರಿಗೆ ಬಹು ದೊಡ್ಡ ಸವಾಲಾಗಿದ್ದ ಸಂದರ್ಭದಲ್ಲಿ ಕೆ.ಹೆಚ್.ಪಾಟೀಲ್ ರವರು ಸಹಕಾರಿ ಕ್ಷೇತ್ರದ ಮುಖಾಂತರ ಹತ್ತಿ ಮಿಲ್‌ಗಳನ್ನು ಪ್ರಾರಂಭ ಮಾಡಿ ರೈತರಿಗೆ ರಕ್ಷಣೆ ಮಾಡಿದರು. ಸಾಮಾಜಿಕ ನ್ಯಾಯವನ್ನು ಒದಗಿಸಲು ಸಹಕಾರ ಕ್ಷೇತ್ರದ ಮೂಲಕ ಹೋರಾಟ ಮಾಡಿರುವ ಅವರನ್ನು ನೆನಪಿಸುವಂತಹ ಕಾರ್ಯವನ್ನು ಶಿರೂರು ಗ್ರಾಮದಲ್ಲಾಗಿದೆ. ನಮ್ಮ ತಂದೆ ಕೆ.ಹೆಚ್.ಪಾಟೀಲ್ ಅವರ ಬಗ್ಗೆ ಎಲ್ಲರೂ ತಮ್ಮ ಸಂಪರ್ಕ ಅನುಭವವನ್ನು ಹಂಚಿಕೊಂಡಿದ್ದಾರೆ ಎಂದರು.

ಸಚಿವ ಎನ್.ಎಸ್.ಭೋಸರಾಜು ಮಾತನಾಡಿ, ಕೆ.ಎಚ್ ಪಾಟೀಲ್ ಅವರು ಸಂಘಟನೆ ಹಾಗೂ ಆಡಳಿತದ ಬಗ್ಗೆ ತಿಳಿಸಲು ನಮಗೆ ಮಾರ್ಗದರ್ಶಕರಾಗಿದ್ದರು, ಯಾವುದೇ ಸಂಘಟನೆ ವಿಷಯದಲ್ಲಿ ಚರ್ಚೆ ಬಂದಾಗ ನೇರವಾಗಿ ನಮಗೆಲ್ಲ ನಿರ್ದೇಶನ ಮಾಡುತ್ತಿದ್ದರು, ರಾಜ್ಯದ ಸಚಿವರಾಗಿದ್ದಾಗ ಅಧಿಕಾರಿಗಳಿಗೂ ಸಹ ನಿರ್ದೇಶನ ಮಾಡಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಅವರು ಮಾಡಿದ್ದಾರೆ. ನಮ್ಮ ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯ ಅಗುವ ಸಂದರ್ಭದಲ್ಲಿ ಅದು ರಾಜಕೀಯದಲ್ಲಿ ಇರಬಹುದು ಅಥವಾ ಆಡಳಿತದಲ್ಲಿ ಇರಬಹುದು, ಅದನ್ನು ನೇರವಾಗಿ ಪ್ರತಿಭಟಿಸಿ, ಹೇಳುವ ನಾಯಕರು ಆ ಕಾಲದಲ್ಲಿ ಅವರೊಬ್ಬರೇ ಇದ್ದದ್ದು. ರಾಜ್ಯದ ಹಿತದೃಷ್ಟಿಯ ಜೊತೆಗೆ ಈ ಭಾಗದ ಹಿತದೃಷ್ಟಿಯನ್ನು ಸಹ ಅವರು ಕಡೆಗಣಿರಸಿಲ್ಲ, ಈ ಭಾಗದ ಅಭಿವೃದ್ಧಿಗೂ ಸಹ ಬಹಳ ಶ್ರಮಿಸಿದರು. ನನ್ನನ್ನು ಗುರುತಿಸಿ ರಾಜಕೀಯದಲ್ಲಿ ಪ್ರೋತ್ಸಾಹ ನೀಡಿದವರು ಯಾರಾದರು ಇದ್ದರೆ ಅದು ಕೆ.ಹೆಚ್.ಪಾಟೇಲ್ ಅವರು, ನಾನು ಇವತ್ತು ಅವರನ್ನು ಸ್ಮರಿಸುತ್ತೇನೆ ಎಂದು ಹೇಳಿದರು.

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಮಾತನಾಡಿ, ಕೆ.ಎಚ್. ಪಾಟೀಲ್ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಅವರು ರೈತಪರ ಕಳಕಳಿ ಉಳ್ಳವರಾಗಿದ್ದರು. ಉತ್ತರ ಕರ್ನಾಟಕದಲ್ಲಿ ಇಂತಹ ಸರಳ ಸಜ್ಜನಿಕೆಯ ರಾಜಕಾರಣಿಗಳ ಸಂಖ್ಯೆ ಕಡಿಮೆ ಇದೆ. ಮುಖ್ಯಮಂತ್ರಿ ಸಿದ್ರಾಮಯ್ಯನವರಿಗೆ ಬಡವರ ಬಗ್ಗೆ ಬಹಳ ಕಾಳಜಿ ಇರುವುದರಿಂದ ಅವರು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಬರುವ ಮುಂದಿನ ಮೂರು ವರ್ಷ ನಮ್ಮ ಸರ್ಕಾರ ಪ್ರಾಮಾಣಿಕ ಸೇವೆ ಜನರಿಗೆ ನೀಡಲಿದೆ. ದಿ. ಕೆ.ಎಚ್. ಪಾಟೀಲ್ ಅವರ ಮೂರ್ತಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ತಮಗೆಲ್ಲರಿಗೂ ಅಭಿನಂದನೆಗಳು ಎಂದು ಹೇಳಿದರು.

ಇದೇ ವೇಳೆ 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಕುಕನೂರು ಮತ್ತು ಯಲಬುರ್ಗಾ ತಾಲ್ಲೂಕಿನ ವಿವಿಧ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟ್ಯಾಬ್ ವಿತರಣೆ ಮಾಡಲಾಗಿದೆ. ಬಳಿಕ ಪುತ್ಥಳಿ ನಿರ್ಮಾಣ ಮಾಡಿದ ಸಿದ್ಧಾರ್ಥ್ ಪಾಟೀಲ್ ದಂಪತಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಸೇರಿ ಸಾಕಷ್ಟು ಮುಖಂಡರು ಭಾಗಿಯಾಗಿದ್ದರು.

Tags: #parameshwarkannadanewsKarnatakaKH PatilKoppalaVijayasakshivijayasakshinews
ShareSendShare
Previous Post

ಅಕ್ರಮ ಸಂಬಂಧ ಶಂಕೆ: ಮಾರಕಾಸ್ತ್ರಗಳಿಂದ ಯುವಕನ ಬರ್ಬರ ಕೊಲೆ!

Next Post

ಸಕ್ಕರೆ ನಾಡು ಮಂಡ್ಯದಲ್ಲಿ ಅಮಾನವೀಯ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಕ್ಕರೆ ನಾಡು ಮಂಡ್ಯದಲ್ಲಿ ಅಮಾನವೀಯ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ!

ಸಕ್ಕರೆ ನಾಡು ಮಂಡ್ಯದಲ್ಲಿ ಅಮಾನವೀಯ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

October 28, 2026
ಚಂದನ್ ಶೆಟ್ಟಿ ‘ಮೈಮಾಟ’ ಹಾಡಿನ ವಿವಾದಕ್ಕೆ ಸ್ಪಷ್ಟನೆ: ವೈಯಕ್ತಿಕ ಜೀವನಕ್ಕೆ ಲಿಂಕ್ ಮಾಡಬೇಡಿ ಎಂದ ಗಾಯಕ

ಚಂದನ್ ಶೆಟ್ಟಿ ‘ಮೈಮಾಟ’ ಹಾಡಿನ ವಿವಾದಕ್ಕೆ ಸ್ಪಷ್ಟನೆ: ವೈಯಕ್ತಿಕ ಜೀವನಕ್ಕೆ ಲಿಂಕ್ ಮಾಡಬೇಡಿ ಎಂದ ಗಾಯಕ

October 28, 2026
ಕಬ್ಬು ಬೆಳೆಗಾರರ ಹೋರಾಟ 4ನೇ ದಿನಕ್ಕೆ: ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಸರ್ಕಾರಕ್ಕೆ ಡೆಡ್‌ಲೈನ್!

ಕಬ್ಬು ಬೆಳೆಗಾರರ ಹೋರಾಟ 4ನೇ ದಿನಕ್ಕೆ: ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಸರ್ಕಾರಕ್ಕೆ ಡೆಡ್‌ಲೈನ್!

October 28, 2026
ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

ಆಟೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ: 13 ವರ್ಷಗಳ ಬಳಿಕ ದರ ಪರಿಷ್ಕರಿಸಿದ ತಮಿಳುನಾಡು ಸರ್ಕಾರ

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

ಯುವಕರಲ್ಲೂ ಹೆಚ್ಚುತ್ತಿದೆ ಸ್ಟ್ರೋಕ್ ಅಪಾಯ: ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

October 28, 2026
ಚಂದನ್ ಶೆಟ್ಟಿ ‘ಮೈಮಾಟ’ ಹಾಡಿನ ವಿವಾದಕ್ಕೆ ಸ್ಪಷ್ಟನೆ: ವೈಯಕ್ತಿಕ ಜೀವನಕ್ಕೆ ಲಿಂಕ್ ಮಾಡಬೇಡಿ ಎಂದ ಗಾಯಕ

ಚಂದನ್ ಶೆಟ್ಟಿ ‘ಮೈಮಾಟ’ ಹಾಡಿನ ವಿವಾದಕ್ಕೆ ಸ್ಪಷ್ಟನೆ: ವೈಯಕ್ತಿಕ ಜೀವನಕ್ಕೆ ಲಿಂಕ್ ಮಾಡಬೇಡಿ ಎಂದ ಗಾಯಕ

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper