HomeSports NewsIPL ಆರಂಭಕ್ಕೂ ಮುನ್ನವೇ ಪ್ಲೇಆಫ್ ಪ್ರವೇಶಿಸುವ 4 ತಂಡ ಹೆಸರಿಸಿದ ಸೆಹ್ವಾಗ್!

IPL ಆರಂಭಕ್ಕೂ ಮುನ್ನವೇ ಪ್ಲೇಆಫ್ ಪ್ರವೇಶಿಸುವ 4 ತಂಡ ಹೆಸರಿಸಿದ ಸೆಹ್ವಾಗ್!

For Dai;y Updates Join Our whatsapp Group

Spread the love

IPL ಪ್ರಿಯರು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಇಂದಿನಿಂದ IPL ಪಂದ್ಯಗಳು ಶುರುವಾಗಲಿದೆ. ಕೆಲವೇ ಗಂಟೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮೊದಲ ಪಂದ್ಯ ನಡೆಯಲಿದೆ.

ಇನ್ನೂ IPL ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಈ ಬಾರಿಯ ಐಪಿಎಲ್​ನಲ್ಲಿ ಪ್ಲೇಆಫ್ ಪ್ರವೇಶಿಸುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ…

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿ ಮತ್ತಷ್ಟು ಬಲಿಷ್ಠವಾಗಿದೆ. ಹೀಗಾಗಿ ಮುಂಬೈ ತಂಡದಿಂದ ಈ ಸಲ ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು. ಅಲ್ಲದೆ ಅವರು ಪ್ಲೇಆಫ್ ಹಂತಕ್ಕೇರುವುದು ಖಚಿತ ಎಂದು ಸೆಹ್ವಾಗ್ ಹೇಳಿದ್ದಾರೆ.

ಸನ್​ರೈಸರ್ಸ್ ಹೈದರಾಬಾದ್: ಕಳೆದ ಬಾರಿ ಫೈನಲ್​ಗೇರಿದ್ದ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲೂ ಅಂತಹ ಬದಲಾವಣೆ ಕಂಡು ಬಂದಿಲ್ಲ. ಅದರಲ್ಲೂ ಅವರ ಬ್ಯಾಟಿಂಗ್ ಲೈನಪ್ ಬಲಿಷ್ಠವಾಗಿರುವುದರಿಂದ ಈ ಸಲ ಕೂಡ ಎಸ್​ಆರ್​ಹೆಚ್ ಟಾಪ್-4 ಹಂತ್ಕೇರಲಿದೆ ಎಂದು ವೀರು ಭವಿಷ್ಯ ನುಡಿದಿದ್ದಾರೆ.

ಪಂಜಾಬ್ ಕಿಂಗ್ಸ್: ಈ ಬಾರಿ ಪಂಜಾಬ್ ಕಿಂಗ್ಸ್ ಸಮತೋಲಿತ ತಂಡವನ್ನು ರೂಪಿಸಿದ್ದಾರೆ. ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಪಂಜಾಬ್ ಕಿಂಗ್ಸ್ ತಂಡದಲ್ಲಿ ಅತ್ಯುತ್ತಮ ಆಟಗಾರರಿದ್ದು, ಹೀಗಾಗಿ ಈ ಪಂಜಾಬ್ ಕೂಡ ಪ್ಲೇಆಫ್ ಹಂತಕ್ಕೇರುವುದನ್ನು ಎದುರು ನೋಡಬಹುದು ಎಂದಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್​: ಎಲ್​ಎಸ್​ಜಿ ಫ್ರಾಂಚೈಸಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ತಂಡಕ್ಕೆ ನಾಯಕನಾಗಿ ರಿಷಭ್ ಪಂತ್ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೆ ತಂಡದಲ್ಲಿ ಉತ್ತಮ ಆಟಗಾರರ ದಂಡೇ ಇದೆ. ಹಾಗಾಗಿ ಲಕ್ನೋ ಸೂಪರ್ ಜೈಂಟ್ಸ್ ಕೂಡ ಪ್ಲೇಆಫ್ ಆಡಲಿದೆ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಇದಾಗ್ಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಹಂತಕ್ಕೇರುವುದು ಡೌಟ್ ಎಂದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!