ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಗೆ ಆಯ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪುರಸಭೆ ಉಮಾ ವಿದ್ಯಾಲಯದ ನಿವೃತ್ತ ದೈಹಿಕ ಶಿಕ್ಷಕರಾದ ಹೆಚ್.ಎಂ. ಮುಳಗುಂದ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 70 ವರ್ಷ ಮೇಲ್ಪಟ್ಟ ಪುರುಷರ ವಿಭಾಗದ 80 ಮೀಟರ್ ಹರ್ಡಲ್ಸ್ (ಅಡೆತಡೆ ಓಟ)ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

Advertisement

ಇಂಡೋನೇಷಿಯಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ/ಸಲ್ಲಿಸುತ್ತಿರುವ ಇವರ ಸೊಸೆ ರಾಜೇಶ್ವರಿ ಬಿ.ಮುಳಗುಂದ ಭಲ್ಲೆ ಹಾಗೂ ಚಕ್ರ ಎಸೆತದಲ್ಲಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ 6ನೇ ಸ್ಥಾನ ಪಡೆದಿದ್ದಾರೆ.


Spread the love

LEAVE A REPLY

Please enter your comment!
Please enter your name here