ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ಮುನ್ಸಿಪಲ್ ಪದವಿಪೂರ್ವ ಕಾಲೇಜಿನ ವತಿಯಿಂದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ಮನೋರಮಾ ಕಾಲೇಜಿನ ವಿದ್ಯಾರ್ಥಿ ಪವನಕುಮಾರ ಮೇಲ್ಮಣಿ ಭಾಗವಹಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಯ ಸಾಧನೆಯನ್ನು ಸಂಸ್ಥೆಯ ಚೆರ್ಮನ್ ಎನ್.ಎಮ್. ಕುಡತರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ್ ಮುದಗಲ್ಲ, ಸಂಸ್ಥೆಯ ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ, ಸಂಯೋಜಕರಾದ ಪ್ರೊ. ಶಾಹಿದಾ ಶಿರಹಟ್ಟಿ, ಸವಿತಾ ಪೂಜಾರ, ಪ್ರೊ. ಯಶವಂತ, ಪ್ರಿಯಾಂಕಾ, ದೈಹಿಕ ನಿರ್ದೇಶಕರಾದ ಖಯುಮ ಎಂ. ನವಲೂರ, ಆಫೀಸ್ ಸೂಪರಿಂಟೆಂಡೆಂಟ್ ಉಮಾ ದಿನ್ನಿ ಹಾಗೂ ಸಿಬ್ಬಂದಿ ವರ್ಗದವರು ಶ್ಲಾಘಿಸಿದ್ದಾರೆ.



