ವಿಜಯಸಾಕ್ಷಿ ಸುದ್ದಿ, ಗದಗ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಜಾರಿಗೊಳಿಸಿದ ಯೋಜನೆಯಾದ ಇನ್ ಸ್ಪೈರ್ ಇನ್ ಸೈನ್ಸ್ ಪರಶುಟ್ ಫಾರ್ ಇನ್‌ಸ್ಲೈರ್ಡ್ ರಿಸರ್ಚ್ ಕಾರ್ಯಕ್ರಮದ ಅಡಿಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ಸಿದ್ದಲಿಂಗ ನಗರದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಬೇಬಿ ಉಮಾಮಹೇಶ್ವರಿ ಬಿ.ಬುಕ್ಕಸಾಗರ ಮಠ, ಅನುಪಮಾ ರಾಘವೇಂದ್ರ ಮುಗಳಿ, ಕಾತುನಬಿ ಆರ್.ಸುಂಕದ, ಜೀವನಗೌಡ ಚಂದ್ರಶೇಖರ ಗೌಡ ಪಾಟೀಲ್ ಆಯ್ಕೆಯಾಗಿದ್ದಾರೆ.
ಪ್ರತಿಭಾವಂತ ಯುವ ವಿದ್ಯಾರ್ಥಿಗಳು ವಿಜ್ಞಾನವನ್ನು ಅಧ್ಯಯನ ಮಾಡಲು ಮತ್ತು ಸಂಶೋಧನೆಯಲ್ಲಿ ವೃತ್ತಿ ಜೀವನವನ್ನು ಮುಂದುವರಿಸುವಂತೆ ಮಾಡಲು 2009ರಿಂದ ಭಾರತ ಸರ್ಕಾರ ಈ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ. 2024-25ನೇ ಸಾಲಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಡಿ.ಡಿಪಿಐ ಆರ್.ಎಸ್. ಬುರಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವೀಂದ್ರ ಶೆಟ್ಟಪ್ಪನವರ್, ಎಸ್‌ಡಿಎಂಸಿ ಅಧ್ಯಕ್ಷರಾದ ರೇಣುಕಾ ರೋಣದ, ಪ್ರಭಾರಿ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಅಣ್ಣಿಗೇರಿ, ಶಾಮ ಲಾಂಡೆ, ಆಯ್.ಬಿ. ಮಡಿವಾಳರ, ಶಂಕ್ರಮ್ಮ ಆರ್.ಹಣಮಗೌಡ್ರು, ಎಂ.ಐ. ಶಿವನಗೌಡ್ರು, ಮಂಜುಳಾ ಪಿ.ಸಾಮ್ರಾಣಿ, ಸುಮಂಗಲ ಎಂ.ಪತ್ತಾರ್, ಶಾರದಾ ಬಾಣದ, ಶೋಭಾ ಎಸ್.ಗಾಳಿ, ರಮೇಶ್ ಬಸರಿ, ಸಾವಿತ್ರಿ ಎ.ಗದ್ದನಕೇರಿ, ಎನ್.ಆರ್. ಶಿರೋಳ್, ಸಬಿಯಾ ಯು.ಕುಷ್ಟಗಿ, ಗಂಗಾ ಎಂ.ಅಳವಂಡಿ, ಮಂಜುಳಾ ಟಿ, ಪದ್ಮಾ ವಿ.ದಾಸರ್, ಲಕ್ಷ್ಮಮ್ಮ ಮಾಳೋತ್ತರ್, ಶಶಿಕಲಾ ಬಿ.ಗುಳೇದವರ, ಸಂಜೀವಿನಿ ಕೂಲಗುಡಿ ಸೇರಿದಂತೆ ಎಸ್‌ಡಿಎಂಸಿ ಸರ್ವ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.