ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ರಾಷ್ಟ್ರೀಯ ಸಂವಿಧಾನ ದಿನಾಚರಣೆ ಅಂಗವಾಗಿ `ನನ್ನ ಮತ–ನನ್ನ ಹಕ್ಕು’ ವಿಷಯವಾಗಿ ಗದಗ ಜಿಲ್ಲಾಡಳಿತ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಇಲ್ಲಿಯ ಬಾಲಕಿಯರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಪಾ ಮಧುಕರ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಗದಗ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು, ಜಿಲ್ಲಾಧಿಕಾರಿಗಳು, ಶಿಕ್ಷಣಾಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ವಿದ್ಯಾರ್ಥಿನಿ ದೀಪಾಳನ್ನು ಸನ್ಮಾನಿಸಿ ಗೌರವಿಸಿದರು. ಇವಳಿಗೆ ಮಾರ್ಗದರ್ಶನ ನೀಡಿದ ಚಿತ್ರಕಲಾ ಶಿಕ್ಷಕಿ ಸರೋಜಾ ಮುಂಡೆವಾಡೆ ಹಾಗೂ ಸಾಧಕ ವಿದ್ಯಾರ್ಥಿನಿಯನ್ನು ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯ ವೈ.ಎಚ್. ಟೆಕ್ಕಲಕೋಟಿ ಹಾಗೂ ಶಿಕ್ಷಕ ಬಳಗದವರು ಅಭಿನಂದಿಸಿದ್ದಾರೆ.



