ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕರ್ನಾಟಕ ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಯಿಂದ ಜರುಗಿದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕುರ್ತಕೋಟಿ ಗ್ರಾಮದ ಹುಲಕೋಟಿ ಶಿಕ್ಷಣ ಸಂಸ್ಥೆಯ ಮನೋಹರ ಇನಾಮತಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ವೈಷ್ಣವಿ ಕೋಳಿವಾಡ, ಶಾಹೀನ ನದಾಫ್ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Advertisement
ಶಿಲ್ಪಾ ಕುಂಬಾರ 3 ಸಾವಿರ ಮೀ ಓಟದಲ್ಲಿ ದ್ವಿತೀಯ, ಸಂಜಯ ಗಣಾಚಾರಿ 110 ಮೀ ಅಡತಡೆ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಸಂಸ್ಥೆಯ ಅಧ್ಯಕ್ಷ ಆರ್.ಎಂ. ಮೂಲಿಮನಿ, ಆರ್.ಎಸ್. ಪಾಟೀಲ, ಯು.ವಿ. ಬೇಟಗೇರಿ, ಗ್ರಾ.ಪಂ ಅಧ್ಯಕ್ಷ ಅಪ್ಪಣ್ಣಾ ಇನಾಮತಿ, ದೈಹಿಕ ಶಿಕ್ಷಕ ಎಂ.ಎಚ್. ಅಂಗಡಿ, ಶಾಲಾ ಸಿಬ್ಬಂದಿಗಳು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.


