ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
Selection for District Level in Games
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜ್ಞಾನ ಗಂಗೋತ್ರಿ ಪದವಿಪೂರ್ವ ಕಾಲೇಜು ಪಾಪನಾಶಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಗದಗ ತಾಲೂಕು ಮಟ್ಟದ ವೈಯಕ್ತಿಕ ಹಾಗೂ ಗುಂಪು ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು.

Advertisement

ಈ ಕ್ರೀಡಾಕೂಟಗಳಲ್ಲಿ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ, ಬಾಲಕರ ಥ್ರೋಬಾಲ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಆರ್.ಎಂ. ಮೂಲಿಮನಿ, ಸ್ಥಾನಿಕ ಸಮಿತಿಯ ಗೌರವ ಕಾರ್ಯದರ್ಶಿ ಮುಕುಂದ ಪೋತ್ನಿಸ್, ಸಂಸ್ಥೆಯ ಆಡಳಿತ ಅಧಿಕಾರಿಗಳಾದ ಆರ್.ಎಸ್. ಪಾಟೀಲ, ಪ್ರಾಚಾರ್ಯರಾದ ಬಿ.ಬಿ. ಪಾಟೀಲ, ದೈಹಿಕ ಶಿಕ್ಷಕರಾದ ವಾಯ್.ಎಸ್. ಹುನಗುಂದ ಹಾಗೂ ಕಾಲೇಜಿನ ಸರ್ವ ಸಿಬ್ಬಂದಿ ವರ್ಗದವರು ವಿಜೇತ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ ಎಂದು ಕ್ರೀಡಾ ಸಮಿತಿಯ ಸಂಯೋಜಕರಾದ ಎ.ಐ. ಹಿಂಡಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here