ವಿಜಯಸಾಕ್ಷಿ ಸುದ್ದಿ, ಗದಗ : ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ರೋಟರಿ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತಾಶ್ರಯದಲ್ಲಿ ನಡೆದ ಗ್ರೂಪ್ ಮಟ್ಟದ ಕ್ರೀಡಾಕೂಟದಲ್ಲಿ ರಾಯಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸಾಯಿಬಾಜ್ ಅಡೆತಡೆ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ದ್ವಿತೀಯ, ಅಸ್ಕಿಯಾ ಎತ್ತರ ಜಿಗಿತದಲ್ಲಿ ಪ್ರಥಮ, ಹರ್ಷ ಕೆ. ಎತ್ತರ ಜಿಗಿತದಲ್ಲಿ ಪ್ರಥಮ, ಸಾಜಿದ ಶೇಖ್ 600 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಬಾಲಕಿಯರ ವಾಲಿಬಾಲ್ ಪಂದ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
Advertisement
ತಾಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಮೋಹನ್ ಕುಮಾರ್ ಬಳ್ಳಾರಿ ಅವರಿಗೆ ಶಾಲೆಯ ಆಡಳಿತಾಧಿಕಾರಿಗಳಾದ ಎ.ಎಂ. ಢಾಲಾಯತ ಹಾಗೂ ಮುಖ್ಯ ಶಿಕ್ಷಕರಾದ ಎಸ್.ಎಸ್. ಕುಂಬಾರ್, ಶಿಕ್ಷಕಿ ಫಾತಿಮಾ ಶುಭ ಹಾರೈಸಿದ್ದಾರೆ.