ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜರುಗಿದ ಕಲಾ ಪ್ರತಿಭೋತ್ಸವ-2025ರಲ್ಲಿ ಗದಗ ಕೆ.ಎಲ್.ಇ ಹೈಸ್ಕೂಲ್ನ ವಿದ್ಯಾರ್ಥಿನಿ ದೃತಿ ಪ್ರವೀಣ ವಾರಕರ ವಿಭಾಗದ ಶಾಸ್ತ್ರೀಯ ನೃತ್ಯದಲ್ಲಿ ಪ್ರಥಮ ಸ್ಥಾನ ಪಡೆದು ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಪ್ರತಿಭಾನ್ವಿತ ವಿದ್ಯಾರ್ಥಿನಿ ದೃತಿ ವಾರಕರ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದು, ವಲಯ ಮಟ್ಟದಲ್ಲೂ ತನ್ನ ಪ್ರತಿಭೆಯನ್ನು ಅನಾವರಣಗೊಳಿಸಲಿ ಎಂದು ಶಾಲೆಯ ಮುಖ್ಯೋಪಾಧ್ಯಾಯ ಮತ್ತು ಶಿಕ್ಷಕ ಬಳಗ, ವಿದ್ಯಾರ್ಥಿಗಳು ಶುಭ ಕೋರಿದ್ದಾರೆ.



