ವಿಜಯಸಾಕ್ಷಿ ಸುದ್ದಿ, ಗದಗ : ದಲಿತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರು, ಸಾಹಿತಿಗಳು ಹಾಗೂ ಚಿಂತಕರಾದ ಡಾ.ಅರ್ಜುನ ಗೊಳಸಂಗಿ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
Advertisement
ಕಳೆದ ಮೂರು ದಶಕಗಳಿಂದ ದಲಿತ ಸಾಹಿತ್ಯ ಪರಿಷತ್ ಮೂಲಕ ರಾಜ್ಯಾದ್ಯಂತ ವೈವಿಧ್ಯಮಯ ಕಾರ್ಯಚಟುವಟಿಕೆಗಳನ್ನು ಸಂಘಟಿಸುತ್ತಾ ಸಾಹಿತ್ಯ ಕ್ಷೇತ್ರದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. ಡಾ. ಅರ್ಜುನ ಗೊಳಸಂಗಿಯವರು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯವಾದ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರವು 2024ನೆಯ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯರನ್ನಾಗಿ ಆಯ್ಕೆಮಾಡಿದೆ. ಡಾ.ಅರ್ಜುನ ಗೊಳಸಂಗಿಯವರ ಅಭಿಮಾನಿಗಳು, ಶಿಷ್ಯರು ಹಾಗೂ ಒಡನಾಡಿಗಳು ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.