ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಗದುಗಿನ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಹಂತದ ಫುಟ್ಬಾಲ್ ಆಟದಲ್ಲಿ ಎಸ್.ಎಸ್.ಕೆ. ಶ್ರೀ ಜಗದಂಬಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸತತವಾಗಿ ಮೂರನೇ ಬಾರಿ ಜಯಭೇರಿ ಬಾರಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾಸಂಸ್ಥೆಯ ಅಧ್ಯಕ್ಷ ಲೋಕನಾಥ ಕಬಾಡಿ, ಚೇರ್ಮನ್ ಗೋವಿಂದರಾಜ ಬಸವಾ, ವೈಸ್ಚೇರ್ಮನ್ ದತ್ತು ಪವಾರ ಉತ್ತಮ ಸ್ಪರ್ಧೆ ನೀಡಿ ಗೆಲುವನ್ನು ಸಾಧಿಸಿದ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಕ ಅನಿಲ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಮುಖ್ಯೋಪಾಧ್ಯಾಯರಾದ ಶಿಲ್ಪಾ ಬೆಣಕಲ್, ಚೇತನಾ ಹವಳದ ಹಾಗೂ ಸಹ ಶಿಕ್ಷಕರು ವಿದ್ಯಾರ್ಥಿಗಳ ಸಾಧನೆಗೆ ಶುಭ ಕೋರಿದ್ದಾರೆ.



