ತುಮಕೂರು: ಸ್ವಯಂ ಘೋಷಿತ ನಾಯಕರಿಂದ ಉಪಚುನಾವಣೆ ಸೋತಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಯತ್ನಾಳ್ʼಗೆ ಟಾಂಗ್ ಕೊಟ್ಟಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು 45 ವರ್ಷ ಇರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದ್ದರು.
ಆದರೆ ವಿಜಯೇಂದ್ರರ 49ನೇ ವರ್ಷದಲ್ಲಿ ಅಧ್ಯಕ್ಷರಾಗಿದ್ದಾರೆ. ಯಾವ ಅರ್ಥದಲ್ಲಿ ಅವರು ಕಿರಿಯರಾಗುತ್ತಾರೆ? ಸೋಮವಾರ ನಡೆದ ಸಭೆಯಲ್ಲಿ 21 ಜಿಲ್ಲಾಧ್ಯಕ್ಷರು ವಿಜಯೇಂದ್ರಗೆ ಬೆಂಬಲ ಕೊಟ್ಟಿದ್ದಾರೆ. ಆದರೆ ಸ್ವಯಂ ಘೋಷಿತ ನಾಯಕರಿಂದ ಉಪಚುನಾವಣೆ ಸೋತಿದೆ ಎಂದು ಹೇಳಿದರು.
ಇನ್ನೂ ಕೇಂದ್ರದಿಂದ ಬಂದಿರೋದು ಫೇಕ್ ನೋಟೀಸ್ ಎನ್ನುವ ಯತ್ನಾಳ್, ಯಡಿಯೂರಪ್ಪನವರು ಕಣ್ಣೀರು ಹಾಕಿದ್ದನ್ನು ಮಿಮಿಕ್ರಿ ಮಾಡಿ ಅವಹೇಳನ ಮಾಡೋದು ಸರಿನಾ? ಕುಮಾರ ಬಂಗಾರಪ್ಪನವರಿಗೆ ರಾಜಕೀಯ ಪುನರ್‌ಜನ್ಮ ಕೊಟ್ಟಿದ್ದು ಯಡಿಯೂರಪ್ಪನವರು. ಆದರೂ ಮೊನ್ನೆ ಮೊನ್ನೆ ಬಂದವರು ವಿಜಯೇಂದ್ರಗೆ ನೀತಿ ಪಾಠ ಹೇಳೋದು ತಪ್ಪು ಎಂದರು.