HomeGadag Newsಮಾಸಿಕ ಸಂತೆಯಿಂದ ಮಹಿಳೆಯರಲ್ಲಿ ಸ್ವಾವಲಂಬನೆ

ಮಾಸಿಕ ಸಂತೆಯಿಂದ ಮಹಿಳೆಯರಲ್ಲಿ ಸ್ವಾವಲಂಬನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಡಂಬಳ: ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಯಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆರಂಭಿಸಲು ಸರ್ಕಾರ ಸೂಚಿಸಿದ್ದು, ಮುಂಡರಗಿ ತಾಲೂಕಿನಾದ್ಯಂತ ಆರಂಭಿಸಲಾಗಿದೆ ಎಂದು ತಾಲೂಕು ಪಂಚಾಯಿತಿ ಇಒ ವಿಶ್ವನಾಥ ಹೊಸಮನಿ ಹೇಳಿದರು.

ಡಂಬಳ ಗ್ರಾ.ಪಂ ಸಂತೆ ಚಾವಣಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಸಂಜೀವಿನಿ ಮಾಸಿಕ ಸಂತೆಯ ತಾಲೂಕು ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಮಾರಾಟ ಮಳಿಗೆಗೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಮಾಸಿಕ ಸಂತೆಯ ಆಯೋಜನೆ ಮೂಲಕ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಹಾಗೂ ಉತ್ಪಾದಕರಿಂದ ನೇರವಾಗಿ ಗ್ರಾಹಕರಿಗೆ ಉತ್ಪನ್ನಗಳನ್ನು ಪರಿಚಯಿಸುವುದು ಹೆಚ್ಚು ಹೆಚ್ಚು ಮಹಿಳೆಯರು ಸ್ವಾವಲಂಬಿಗಳಾಗಲು ಉಪಯುಕ್ತವಾಗಿದೆ ಎಂದು ತಿಳಿಸಿದರು.

ಗ್ರಾ.ಪಂ ಅಧ್ಯಕ್ಷೆ ಶಿವಲೀಲಾ ಬಂಡಿಹಾಳ ಮಾತನಾಡಿ, ಸಂತೆಗಳಲ್ಲಿ ಹೆಚ್ಚಿನ ಸಂಘಗಳು ಪಾಲ್ಗೊಳ್ಳಬೇಕು. ತಾವು ತಯಾರಿಸಿದ ಪರಿಶುದ್ಧವಾದ ಉತ್ಪನ್ನಗಳ ಬಗ್ಗೆ ಪ್ರಚಾರವನ್ನೂ ಮಾಡಬೇಕು. ಸಾಮಾಜಿಕ ಜಾಲತಾಣಗಳು ಹಾಗೂ ವಾಟ್ಸಪ್ ಮೂಲಕ ಉತ್ಪನ್ನಗಳ ಪ್ರಚಾರ ನಡೆಸಿ ಆನ್‌ಲೈನ್ ಮೂಲಕ ಮಾರಾಟ ಮಾಡಲು ಪ್ರಯತ್ನಿಸಿ ಎಂದು ಹೇಳಿದರು.

ಪಿಡಿಒ ಲತಾ ಮಾನೆ ಮಾತನಾಡಿ, ಸ್ವಸಹಾಯ ಸಂಘಗಳ ಮಹಿಳೆಯರು ಸ್ಥಳೀಯವಾಗಿ ಉತ್ಪಾದಿಸಿದ ಉತ್ಪನ್ನಗಳಿಗೆ ಮೌಲ್ಯವರ್ಧನೆ ನೀಡುವುದು, ಮಧ್ಯವರ್ತಿಗಳಿಲ್ಲದೆ ನೇರವಾಗಿ ಗ್ರಾಹಕರಿಗೆ ತಲುಪಿಸಲು ಮತ್ತು ಸದಸ್ಯರ ಆದಾಯವನ್ನು ಹೆಚ್ಚಿಸಲು ಸೂಕ್ತ ಮಾರುಕಟ್ಟೆ, ಪ್ರದರ್ಶನಕ್ಕೆ ಉತ್ತಮ ಅವಕಾಶ ಕಲ್ಪಿಸುವುದು ಸಂಜೀವಿನಿ ಮಾಸಿಕ ಸಂತೆಯ ಉದ್ದೇಶವಾಗಿದೆ. ಪ್ರತಿಯೊಬ್ಬ ಮಹಿಳೆಯರು ಮನೆಯ ಶೌಚಾಲಗಳನ್ನು ಬಳಸಿಕೊಳ್ಳಿ ಮತ್ತು ಶೌಚಾಲಯ ಇಲ್ಲದಿರುವವರು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಕೆವಿಜಿ ಬ್ಯಾಂಕ್ ಪೀಲ್ಡ್ ಆಫೀಸರ್ ಶ್ರೀಧರ ಮಾತನಾಡಿ, ಸಂಜೀವಿನಿ ಮಾಸಿಕ ಸಂತೆಯು ಗ್ರಾಮ ಮಟ್ಟದ್ದಾಗಿದ್ದು, ಮಹಿಳೆಯರು ಯೋಜನೆಯ ಲಾಭವನ್ನು ಪಡೆದುಕೊಂಡು ಸ್ವಾವಲಂಬಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ಡಂಬಳ ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಂಗಳಾ ಸಣ್ಣಪ್ಯಾಟಿ, ಖಜಾಂಚಿ ವಿಜಯಲಕ್ಷ್ಮೀ ಗುರುವಿನ, ಕೆನರಾ ಬ್ಯಾಂಕ್ ಸಂಯೋಜಕ ಸಂದೀಪ ಕಟ್ಟಿ, ಗ್ರಾ.ಪಂ ಸದಸ್ಯರಾದ ಶಂಕ್ರಪ್ಪ ಗಡಗಿ, ಮಾರುತಿ ಬಿಸನಳ್ಳಿ, ಜ್ಯೋತಿ ಬಾವಿ, ಮಹಾದೇವಕ್ಕ ಕೊಳ್ಳಾರ, ಯಲ್ಲಮ್ಮ ಬಂಡಿ, ಶೇಕವ್ವ ಪಲ್ಲೇದ, ಕಿರಣಕುಮಾರ ಎಂ.ಸಂಗನಾಳ, ಲಲಿತಾ ಜೋಂಡಿ, ಸಂಜೀವಿನಿ ಮಹಿಳಾ ಸದಸ್ಯರು, ಸಿಬ್ಬಂದಿ ವರ್ಗ, ಗ್ರಾ.ಪಂ ಸಿಬ್ಬಂದಿ ವರ್ಗ ಇದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!