ಚಾಮರಾಜನಗರ:- ಸೆಲ್ಫಿ ತೆಗೆಯಲು ಹೋಗಿ ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದ ವ್ಯಕ್ತಿಗೆ 25 ಸಾವಿರ ದಂಡ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ನಂಜನಗೂಡಿನ ಬಸವರಾಜು ಎಂಬ ವ್ಯಕ್ತಿಗೆ ದಂಡ ವಿಧಿಸಲಾಗಿದೆ. ಬಂಡೀಪುರದಲ್ಲಿ ಸೆಲ್ಫಿ ತೆಗೆಯಲು ಹೋಗಿ ಕಾಡಾನೆ ದಾಳಿಯಿಂದ ಪಾರಾಗಿದ್ದ. ಈತ ಘಟನೆ ಬಳಿಕ ಅರಣ್ಯ ಇಲಾಖೆ ಕಣ್ತಪ್ಪಿಸಿ ಕೇರಳಕ್ಕೆ ಹೋಗಿ ಕರ್ನಾಟಕಕ್ಕೆ ಬಂದಿದ್ದ. ಘಟನೆ ಬಳಿಕ ಮೊಬೈಲ್ ಸ್ವೀಚ್ ಆಫ್ ಮಾಡಿದ್ದ. ಕೊನೆಗೂ ಬಸವರಾಜುನನ್ನು ಅರಣ್ಯ ಸಿಬ್ಬಂದಿ ಪತ್ತೆ ಹಚ್ಚಿ ಬಿಸಿ ಮುಟ್ಟಿಸಿದ್ದಾರೆ.
ಇದೀಗಾ ಬಂಡೀಪುರದ ಅರಣ್ಯ ಇಲಾಖೆ ಅಧಿಕಾರಿಗಳು ಬಸವರಾಜು ಅವರಿಂದ ವಿಡಿಯೋ ಮಾಡಿಸಿ ಹರಿಬಿಟ್ಟಿದ್ದಾರೆ. ಈ ವಿಡಿಯೋದಲ್ಲಿ ಬಸವರಾಜು, ನಾನು ಬಂಕಾಪುರದ ದೇವಾಸ್ಥಾನಕ್ಕೆ ಹೋಗಿದ್ದೆ. ಅಲ್ಲಿಂದ ಬರುವಾಗ ಮೋಜು ಮಸ್ತಿಗಾಗಿ ಸೆಲ್ಫಿ, ಫೋಟೋ ತೆಗೆಯಲು ಮುಂದಾಗಿದ್ದೆ. ಈ ವೇಳೆ ಕಾಡಾನೆ ನನ್ನ ಮೇಲೆ ದಾಳಿ ನಡೆಸಿತು. ಇನ್ಮುಂದೆ ಯಾರೂ ಕೂಡ ಅರಣ್ಯ ಪ್ರದೇಶದಲ್ಲಿ ವಾಹನ ನಿಲ್ಲಿಸಬೇಡಿ, ಯಾರು ಕೂಡ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ಫೋಟೋ, ಸೆಲ್ಫಿ ತೆಗೆಯುವ ಕೆಲಸ ಬೇಡ ಎಂದು ಮನವಿ ಮಾಡಿದ್ದಾರೆ.