ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಕತ್ತೆ ಖರೀದಿ ಭರಾಟೆ ಜೋರಾಗಿತ್ತು. ಇದರ ಬೆನ್ನಲ್ಲೇ ಜನ್ನಿ ಮಿಲ್ಕ್ ಕಂಪನಿ ಯಾವುದೇ ಪರವಾನಿಗೆ ಪಡೆಯದೆ ಕತ್ತೆಗಳ ಮಾರಾಟ ಮಾಡುತ್ತಿದ್ದ ಕಂಪನಿಯನ್ನು ಕ್ಲೋಸ್ ಮಾಡಿ, ಕಂಪನಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಮೂಲ ಕಚೇರಿ ಹೊಂದಿದೆ. ಅನಧಿಕೃತವಾಗಿ, ಟ್ರೇಡ್ ಲೈಸೆನ್ಸ್ ಇಲ್ಲದೇ ಕತ್ತೆಗಳ ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಅಧಿಕಾರಿಗಳು ತಾತ್ಕಾಲಿಕವಾಗಿ ಕ್ಲೋಸ್ ಮಾಡಿಸಿದ್ದಾರೆ.
ಅನಧಿಕೃತ ಕಚೇರಿ ಓಪನ್ ಮಾಡಿ, ರೈತರನ್ನ ಗುರಿಯಾಗಿಸಿಕೊಂಡು ಕತ್ತೆ ಮಾರಾಟ ಮಾಡಿ, ಹಾಲು ಖರೀದಿಸುತ್ತಿದ್ದ ಬಗ್ಗೆ ಅಧಿಕೃತ ಮಾಹಿತಿಯನ್ನು ಪಡೆದು ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಗರಾಭಿವೃದ್ಧಿ ಕೋಶಾಧಿಕಾರಿ ಮನೋಹರ್, ಹೊಸಪೇಟೆ ನಗರಸಭೆ ಪೌರಾಯುಕ್ತ ಚಂದ್ರಪ್ಪ ನೇತೃತ್ವದ ಅಧಿಕಾರಿಗಳ ತಂಡ ದಾಳಿ ಮಾಡಿ, ಒಂದು ಘಂಟೆಗಳ ಕಾಲ ತಪಾಸಣೆ ನಡೆಸಿ ಕಚೇರಿಗೆ ಬೀಗ ಜಡಿದು, ಸೀಲ್ ಹಾಕಿಸಿದ್ದಾರೆ.