ಬೆಂಗಳೂರು: ಮೆಡಿಕಲ್ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕೆಲವು ಮೆಡಿಕಲ್ʼಗಳಲ್ಲಿ ಸಿಂಥೆಟಿಕ್ ಡ್ರಗ್ ಮಾರಾಟ ಮಾಡಲಾಗುತ್ತೆ.
ಅದರ ನಿಯಂತ್ರಣದ ಬಗ್ಗೆ ಇಂದು ಸಿಎಂ ಸಭೆ ಕರೆದಿದ್ದಾರೆ ಎಂದು ತಿಳಿಸಿದರು. ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು.
ಪೇನ್ ಕಿಲ್ಲರ್ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್‌ಕ್ರೈಬ್ ಮಾಡಿರುವುನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್ ಕಂಟ್ರೋಲರ್ಸ್‌ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು.



