ಹಿರಿಯ ಕಲಾವಿದರಿಂದ ಸಿಎಂ ಭೇಟಿ: ಈ ಇಬ್ಬರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಮನವಿ!

0
Spread the love

ಬೆಂಗಳೂರು:- ಹಿರಿಯ ಕಲಾವಿದರ ತಂಡ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಮನವಿ ಮಾಡಿದ್ದಾರೆ.

Advertisement

ಎಸ್, ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಾದ ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ಕ್ಯಾಬಿನೆಟ್​​ನಲ್ಲಿ ಈ ಕುರಿತು ಚರ್ಚೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಇದರಿಂದ ನಮಗೆ ಖುಷಿ ಆಗಿದೆ’ ಎಂದು ಜಯಮಾಲಾ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here