• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಹಿರಿಯ ನಾಗರಿಕರು ಯುವ ಪೀಳಿಗೆಗೆ ದಾರಿದೀಪ: ಸಚಿವ ಡಾ. ಎಚ್.ಕೆ. ಪಾಟೀಲ

Vijaya Sakshi News Desk by Vijaya Sakshi News Desk
October 1, 2025
in Gadag News
ಹಿರಿಯ ನಾಗರಿಕರು ಯುವ ಪೀಳಿಗೆಗೆ ದಾರಿದೀಪ: ಸಚಿವ ಡಾ. ಎಚ್.ಕೆ. ಪಾಟೀಲ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಸಂಸ್ಕೃತಿಯಲ್ಲಿ ಹಿರಿಯ ನಾಗರಿಕರಿಗೆ ವಿಶಿಷ್ಟ ಗೌರವವನ್ನು ಹಾಗೂ ಪ್ರಾಶಸ್ತ್ಯವನ್ನು ಕೊಡಲಾಗಿದೆ. ಹಿರಿಯ ನಾಗರಿಕರ ಮಾರ್ಗದರ್ಶನ ಹಾಗೂ ಅನುಭವಗಳು ಯುವ ಪೀಳಿಗೆಗೆ ದಾರಿದೀಪವಾಗಿದ್ದು, ಸಂತಸಮಯ ಹಾಗೂ ಬಲಿಷ್ಠ ಸಮಾಜ ಕಟ್ಟುವಲ್ಲಿ ಹಿರಿಯ ನಾಗರಿಕರ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯದ ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರುಗಳ ಸಹಯೋಗದಲ್ಲಿ ಬುಧವಾರ `ಹಿರಿಯ ನಾಗರಿಕರು: ನಮ್ಮ ಆಶೋತ್ತರಗಳು, ನಮ್ಮ ಯೋಗಕ್ಷೇಮ ಮತ್ತು ನಮ್ಮ ಹಕ್ಕುಗಳನ್ನು ಸ್ಥಳೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲ ಸಶಕ್ತರು’ ಎಂಬ ಘೋಷವಾಕ್ಯದಡಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಿರಿಯ ನಾಗರಿಕರಿಗೆ ಸರ್ಕಾರದಿಂದ ವಿವಿಧ ಯೋಜನೆಗಳ ಸೌಲಭ್ಯ ವಿತರಣೆ ಹಾಗೂ ಇನ್ನಿತರ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾಡಳಿತ ಆ ಸಮಸ್ಯೆಗಳಿಗೆ ಸ್ಪಂದಿಸುತ್ತದೆ. ಪ್ರಭುವಿನೆಡೆಗೆ ಪ್ರಭುತ್ವ ಯಂತ್ರದಲ್ಲಿಯೂ ಸಹ ಹಿರಿಯ ನಾಗರಿಕರು ತಮ್ಮ ಸಮಸ್ಯೆಗಳ ಕುರಿತು ದೂರು ದಾಖಲಿಸಬಹುದಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಗೌರವಿಸಲಾಯಿತು. ಹಿರಿಯ ನಾಗರಿಕರಿಗಾಗಿ ಆಯೋಜಿಸಲಾಗಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಗದಗ ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಪ್ರೊ. ಕೆ.ಎಚ್. ಬೇಲೂರ, ಗದಗ ಜಿಲ್ಲಾ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಜಿ.ಎಸ್. ಹಿರೇಮಠ, ಕ.ರಾ.ಹಿ.ನಾ ಹಾಗೂ ನಿ.ನಾ. ಸಂಘದ ಎಸ್.ಕೆ. ಖಂಡೆಪ್ಪಗೌಡರ, ಗದಗ ಪ್ರೋಬಸ್ ಕ್ಲಬ್‌ನ ಬಿ.ಎಸ್. ಗೌಡರ, ಡಾ. ರಾಜೇಂದ್ರ ಗೋಡಬೋಲೆ, ಹಿರಿಯ ನಾಗರಿಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷರು, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘಗಳ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಬಿ.ಎಮ್. ಬಿಳೆಯಲಿ, ಹನುಮಂತಪ್ಪ ಗರಗ, ಬಸಯ್ಯ ಸ್ಥಾವರಮಠ, ಲೋಕಪ್ಪ ಸೇರಿದಂತೆ ವಿವಿಧ ಹಿರಿಯ ನಾಗರಿಕರು, ಗಣ್ಯರು ಹಾಜರಿದ್ದರು.

ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೆ. ಮಹಾಂತೇಶ್ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ್ ಕಾರ್ಯಕ್ರಮ ನಿರೂಪಿಸಿದರು.

ಹಿರಿಯ ನಾಗರಿಕರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಹಾಗೂ ಪೂಜ್ಯ ಭಾವನೆಯಿಂದ ಕಾಣಬೇಕು. ಹಿರಿಯ ನಾಗರಿಕರು ತಮ್ಮ ತಮ್ಮ ಕುಟುಂಬಗಳಲ್ಲಿ ಸಾಕ್ಷಿಪ್ರಜ್ಞೆಯಾಗಿ ಮಾರ್ಗದರ್ಶನ ಮಾಡುತ್ತಾರೆ. ಭಾರತೀಯ ಸಮಾಜದಲ್ಲಿ ಹಿರಿಯರಿಗೆ ಕೊಟ್ಟಿರುವ ಗೌರವದ ಸಂಸ್ಕೃತಿಯಿಂದ ಭಾರತ ದೇಶವು ಸುಸಂಸ್ಕೃತ ಹಾಗೂ ಸಂತೋಷಕರ ಸಮಾಜವನ್ನಾಗಿಸಲು ಕಾರಣವಾಗಿದೆ. ಹಿರಿಯ ನಾಗರಿಕರಿಗೆ ಸರ್ಕಾರದಿಂದ ವಿವಿಧ ಯೋಜನೆಗಳು ಜಾರಿಯಲ್ಲಿದ್ದು, ಅವುಗಳ ಸದ್ಬಳಕೆಯಾಗಬೇಕು ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

Tags: BreakingNewsDr. H.K. PatilgadagnewsKarnatakaVijayasakshivijayasakshinews
ShareSendShare
Previous Post

ಸಂಸ್ಥೆಯನ್ನು ಸಮರ್ಥವಾಗಿ ಬೆಳೆಸಿ: ಸಚಿವ ಎಚ್.ಕೆ. ಪಾಟೀಲ

Next Post

ಶ್ರೀದೇವಿಯ ಆರಾಧನೆಯಿಂದ ಆಂತರಿಕ ಶಕ್ತಿ ವೃದ್ಧಿ: ಡಾ. ರಾಜಗುರು ಗುರುಸ್ವಾಮಿ ಕಲಕೇರಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಶ್ರೀದೇವಿಯ ಆರಾಧನೆಯಿಂದ ಆಂತರಿಕ ಶಕ್ತಿ ವೃದ್ಧಿ: ಡಾ. ರಾಜಗುರು ಗುರುಸ್ವಾಮಿ ಕಲಕೇರಿ

ಶ್ರೀದೇವಿಯ ಆರಾಧನೆಯಿಂದ ಆಂತರಿಕ ಶಕ್ತಿ ವೃದ್ಧಿ: ಡಾ. ರಾಜಗುರು ಗುರುಸ್ವಾಮಿ ಕಲಕೇರಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper