ತಿರುವನಂತಪುರಂ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇರಳದ ಹಿರಿಯ ಕಾಂಗ್ರೆಸ್ ನಾಯಕ ಪಿ.ಪಿ. ತಂಕಚನ್ ವಿಧಿವಶರಾಗಿದ್ದಾರೆ.
ಇವರು ತಂಕಚನ್ ಕೇರಳ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ರಾಜ್ಯದಲ್ಲಿ ಪಕ್ಷ ಮತ್ತು ಮೈತ್ರಿಕೂಟದಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. 1939 ಜುಲೈ 29 ರಂದು ಅಂಗಮಲಿಯಲ್ಲಿ ಜನಿಸಿದ ಅವರು ಯುವಕರಾಗಿದ್ದಾಗಲೇ ರಾಜಕೀಯವನ್ನು ಪ್ರವೇಶಿಸಿದರು ಎನ್ನಲಾಗಿದೆ.
ಆದರೆ ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಕೆರಳದ ಹಿರಿಯ ಕಾಂಗ್ರೆಸ್ ನಾಯಕ ಪಿ.ಪಿ. ತಂಕಚನ್ (86) ನಿಧನರಾಗಿದ್ದಾರೆ. ಗುರುವಾರ ಸಂಜೆ 4:30 ರ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ.



