ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​. ವೈ. ಮೇಟಿ ಇನ್ನಿಲ್ಲ: ಸಿಎಂ ಸಿದ್ದರಾಮಯ್ಯ ಸಂತಾಪ 

0
Spread the love

ಬೆಂಗಳೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಾಂಗ್ರೆಸ್​ ಹಿರಿಯ ಶಾಸಕ ಹೆಚ್​. ವೈ. ಮೇಟಿ(79) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದ ಹಿನ್ನಲೆ ಅವರು ಮೃತಪಟ್ಟಿದ್ದಾರೆ. ಇನ್ನೂ ಶಾಸಕರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Advertisement

ಎಕ್ಸ್ ಪೋಸ್ಟ್ ಮೂಲಕ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ. ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು.

ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here