ಕಲಬುರ್ಗಿ: ಕಲಬುರಗಿ ಜಿಲ್ಲಾ ನ್ಯಾಯಲಯದಲ್ಲಿ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ ಜರುಗಿದೆ. ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ.
ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ಕೋರ್ಟ್‌ಗೆ ಬಂದಿದ್ದರು.
ಆದ್ರೆ ಕೋರ್ಟ್ ಹಾಲ್‌ಗೆ ಬರುವುದಕ್ಕಿಂತ ಮುಂಚೆ ಎದೆಯಲ್ಲಿ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆ ಕರೆತರುವ ಮುನ್ನವೇ ನ್ಯಾಯಧೀಶರು ಕೊನೆ ಉಸಿರೆಳೆದಿದ್ದಾರೆ.



