ಬೆಂಗಳೂರು:- ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಜರುಗಿದೆ. ಎರಡು ಬಸ್, ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಈ ಘಟನೆ ಜರುಗಿದೆ.
ಅಪಘಾತದಲ್ಲಿ ಬಸ್ ಗಳು ಜಖಂಗೊಂಡಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ಇನ್ನೂ ಘಟನೆಯಿಂದ ತಾತ್ಕಾಲಿಕವಾಗಿ ಎಲಿವೇಟೆಡ್ ಫ್ಲೈಓವರ್ ಬಂದ್ ಮಾಡಲಾಗಿದೆ. ಹೊಸೂರು ಕಡೆ ಹೋಗುವವರು ಫ್ಲೈಓವರ್ ಕೆಳಗಡೆ ಹೋಗಲು ಸಂಚಾರಿ ಪೊಲೀಸರು ಸೂಚನೆ ಕೊಟ್ಟಿದ್ದಾರೆ.
ಸ್ಥಳಕ್ಕೆ ಹೆಚ್‌ಎಸ್‌ಆರ್ ಲೇಔಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ವಾಹನಗಳನ್ನು ತೆರವುಗೊಳಿಸುತ್ತಿದ್ದಾರೆ.



