ಬೆಂಗಳೂರು: ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ನೆಲಮಂಗಲ ನಗರದ ಅರಿಶಿನಕುಂಟೆ ಫ್ಲೈ ಓವರ್ ಮೇಲೆ ಜರುಗಿದೆ.
ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ನಾಲ್ಕು ಕಾರುಗಳ ನಡುವೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಿಂದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ವೀಕೆಂಡ್ ಹಿನ್ನೆಲೆಯಲ್ಲಿ ಬೇರೆಡೆಗೆ ತೆರಳಿದ್ದವರು ಬೆಂಗಳೂರು ಕಡೆ ಬರುವಾಗ ಈ ಅಪಘಾತ ಸಂಭವಿಸಿದೆ. ಘಟನೆ ಬೆನ್ನಲ್ಲೇ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



