ಶ್ರೀನಗರ: ಕಾಶ್ಮೀರದ ರಾಂಬನ್‌ನ ಚಂದರ್‌ಕೋಟ್ ಲಂಗರ್ ಪಾಯಿಂಟ್‌ನಲ್ಲಿ ಅಮರನಾಥ ಯಾತ್ರೆಗಾಗಿ ತೆರಳುತ್ತಿದ್ದ ಐದು ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಜರುಗಿದೆ.
Advertisement
ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅಮರನಾಥ ಯಾತ್ರೆಗಾಗಿ ಭಕ್ತರು ಐದು ಬಸ್‌ಗಳ ಮೂಲಕ ಪಹಲ್ಗಾಮ್‌ಗೆ ತೆರಳುತ್ತಿದ್ದರು. ಈ ವೇಳೆ ಲಂಗರ್ ಪಾಯಿಂಟ್‌ನಲ್ಲಿ ನಾಲ್ಕು ಬಸ್‌ಗಳು ನಿಂತಿದ್ದವು. ಇದೇ ಸಂದರ್ಭದಲ್ಲಿ ಯಾತ್ರೆಯ ಬೆಂಗಾವಲು ಪಡೆಯ ಬಸ್‌ನ ಬ್ರೇಕ್ ಫೇಲ್ ಆಗಿ, ನಿಯಂತ್ರಣ ಕಳೆದುಕೊಂಡು ಇನ್ನುಳಿದ ಬಸ್‌ಗಳಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಡಿಎಚ್ ರಾಂಬನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಯಾರಿಗೂ ದೊಡ್ಡ ಮಟ್ಟದ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.