ಬಳ್ಳಾರಿ:- ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಕೇಸ್ ಮುಂದುವರಿದಿದ್ದು, ಇಂದು ಮತ್ತೋರ್ವ ಮಹಿಳೆ ದುರ್ಮರಣ ಹೊಂದಿದ್ದಾರೆ. ಇದು ರಾಜ್ಯದ ಜನತೆಯನ್ನೇ ಬೆಚ್ಚಿ ಬೀಳಿಸಿದೆ.
ಎಸ್, ಬಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಿಸಿಕೊಂಡ ಬಳಿಕ ಮತ್ತೋರ್ವ ಬಾಣಂತಿ ಇಂದು ಸಾವನ್ನಪ್ಪಿದ್ದಾರೆ. 25 ವರ್ಷದ ಸುಮಯಾ ಮೃತ ಮಹಿಳೆ. ಈಕೆ ಕಳೆದ 23 ದಿನಗಳಿಂದ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಪೈಕಿ ಮೃತ ಬಾಣಂತಿಯರ ಸಂಖ್ಯೆ 5ಕ್ಕೇರಿದೆ.
ಸಿಸೇರಿಯನ್ ಮಾಡಿಸಿಕೊಂಡ ಬಳಿಕ ಸುಮಯಾ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ನವೆಂಬರ್ 12 ರಂದು ಸುಮಾಯ ಅವರನ್ನ ಬಿಮ್ಸ್‌ಗೆ ರವಾನೆ ಮಾಡಲಾಗಿತ್ತು. ಈ ನಡುವೆ ಕಿಡ್ನಿ ವೈಫಲ್ಯವಾಗಿ ಸತತ ಡಯಾಲಿಸಿಸ್ ಮಾಡಲಾಗ್ತಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ 23 ದಿನಗಳ ಬಳಿಕ ಸುಮಯಾ ಸಾವನ್ನಪ್ಪಿದ್ದಾರೆ.
ಒಟ್ಟಾರೆ ಒಂದೇ ಆಸ್ಪತ್ರೆಯಲ್ಲಿ ಈ ರೀತಿ ಬಾಣಂತಿಯರ ಸಾವು ಪದೇ ಪದೇ ಸಂಭವಿಸುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.