ಬಳ್ಳಾರಿಯ ಸರ್ಕಾರಿ ಆಸ್ಪತ್ರೆಗಳಿಗೆ ಆದೇನಾಗಿದೆಯೋ ಗೊತ್ತಿಲ್ಲ. ಬಾಣಂತಿಯರ ಸರಣಿ ಸಾವುಗಳಿಗೆ ಕಾರಣವಾಗುತ್ತಿದೆ. ಇದೀಗ ಜಿಲ್ಲೆಯಲ್ಲಿ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾದರೇ ಎಂಬ ಅನುಮಾನವೂ ವ್ಯಕ್ತವಾಗಿದೆ.
ಇದರ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. 25ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಹೆರಿಗೆ ವಾರ್ಡ್, ಐಸಿಯು ಮತ್ತು ಔಷಧಿ ದಾಸ್ತಾನು ಉಗ್ರಾಣಗಳನ್ನು ಪರಿಶೀಲಿಸುತ್ತಿದೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಈ ತನಿಖೆ ನಡೆಯುತ್ತಿದೆ.
ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿ ಜಿಲ್ಲಾಸ್ಪತ್ರೆಯ ಔಷಧ ವಿಭಾಗದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. IV ಹಾಗೂ RL ಪ್ಲೂಯಿಡ್ ಔಷಧಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಾಗೇ ಬಾಣಂತಿಯರ ಅಸ್ವಸ್ಥರಾಗಲು ಕಾರಣವೇನು ಎಂಬುವುದರ ಬಗ್ಗೆ ನಾಲ್ವರು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.