ಭೀಕರ ಸರಣಿ ಅಪಘಾತ: ಬಾಗಲಕೋಟೆಯಲ್ಲಿ ಮೂವರು ಸಾವು!

0
Spread the love

ಬಾಗಲಕೋಟೆ:- ಭೀಕರ ಸರಣಿ‌ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದ ಬಳಿ ಜರುಗಿದೆ.

Advertisement

ಮೃತರನ್ನು ಮಹಾಂತೇಶ್ ಹೊನಕಟ್ಟಿ, ಭೀಮಪ್ಪ ಗಂಟೆಣ್ಣವರ ಜಂಬಗಿ, ಆನಂದ ಬಾಡಗಿ ಎಂದು ಗುರುತಿಸಲಾಗಿದೆ. ನಸುಕಿನ ಜಾವ ಜಮಖಂಡಿ‌ಯಿಂದ ವಿಜಯಪುರಕ್ಕೆ ಟಾಟಾ ಏಸ್ ವಾಹನ ಹೊರಟಿತ್ತು. ಕಾರು ವಿಜಯಪುರದಿಂದ ಜಮಖಂಡಿಗೆ ಬರುತ್ತಿತ್ತು. ಕಾರು ಹಾಗೂ ಟಾಟಾ ಏಸ್ ವಾಹನ ಪರಸ್ಪರ ಡಿಕ್ಕಿಯಾಗಿವೆ.

ಟಾಟಾ ಏಸ್ ವಾಹನಕ್ಕೆ ಹಿಂಬದಿಯಿದ್ದ ಎರಡು ಬೈಕಗಳು ಡಿಕ್ಕಿ ಹೊಡೆದಿವೆ. ಸ್ಥಳಕ್ಕೆ ಜಮಖಂಡಿ‌ ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್ಐ ಗಂಗಾಧರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here