ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಇಂಡಸ್ಟ್ರೀಗೆ ಕಾಲಿಟ್ಟಿರುವ ಪ್ರಣಂ, ಈಗ ‘S/O ಮುತ್ತಣ್ಣ’ನಾಗಲು ಸಜ್ಜಾಗಿದ್ದಾರೆ.
ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ.
ದೇವರಾಜ್ ದಂಪತಿ ಆಗಮಿಸಿ ಮಗನ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ. ಅಂದಹಾಗೇ S/O ಮುತ್ತಣ್ಣನಿಗೆ ಶ್ರೀಕಾಂತ್ ಹುಣ್ಸೂರ್ ಸಾರಥಿ. ಆರ್.ಚಂದ್ರು ಹಾಗೂ ಪ್ರೇಮ್ಸ್ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶ್ರೀಕಾಂತ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.
ಪ್ರಣಂ ದೇವರಾಜ್ ನಾಯಕನಾಗಿ ನಟಿಸುತ್ತಿರುವ S/O ಮುತ್ತಣ್ಣ ಸಿನಿಮಾದಲ್ಲಿ ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ತಾರಾಬಳಗದಲ್ಲಿದ್ದಾರೆ.
ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲ್ಮಂಸ್ ಬ್ಯಾನರ್ ನಡಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. S/O ಮುತ್ತಣ್ಣ ಸಿನಿಮಾಗೆ ಸ್ಕೇಟ್ಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಚಿತ್ರತಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.