ನವದೆಹಲಿ:- ತೀವ್ರ ಎದೆನೋವು ಹಿನ್ನೆಲೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಏಮ್ಸ್ ಆಸ್ಪತ್ರೆ ಹೃದ್ರೋಗ ವಿಭಾಗದ ಮುಖ್ಯಸ್ಥರಾದ ಡಾ. ರಾಜೀವ್ ನಾರಂಗ್ ತಂಡ ಉಪರಾಷ್ಟ್ರಪತಿಗೆ ಅಗತ್ಯ ತಪಾಸಣೆ ನಡೆಸಿದ್ದು, ಚಿಕಿತ್ಸೆ ಮುಂದುವರಿಸಿದ್ದಾರೆ. ಎದೆ ನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸ್ವಲ್ಪ ಸುಸ್ತಾದಂತೆ ಕಂಡು ಬಂದಿದ್ದರು. ಸದ್ಯದ ಮಾಹಿತಿ ಪ್ರಕಾರ ಜಗದೀಪ್ ಧನಕರ್ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.
ಉಪರಾಷ್ಟ್ರಪತಿ ಜಗದೀಪ್ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ಜೆ.ಪಿ ನಡ್ಡಾ ಅವರು ಏಮ್ಸ್‌ಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಕೇಂದ್ರ ಹಿರಿಯ ನಾಯಕರು ಏಮ್ಸ್ ಆಸ್ಪತ್ರೆ ವೈದ್ಯರಿಂದ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸುತ್ತಿದ್ದಾರೆ.



