HomePolitics Newsರಾಜ್ಯದಲ್ಲಿ ಭೀಕರ ಬರ: ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ!

ರಾಜ್ಯದಲ್ಲಿ ಭೀಕರ ಬರ: ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ!

For Dai;y Updates Join Our whatsapp Group

ಹಾವೇರಿ: ರಾಜ್ಯದಲ್ಲಿ ಕಳೆದ ಎರಡು ದಶಕಗಳಲ್ಲೇ ಕಂಡುಬರದಂತಹ ತೀವ್ರ ಬರಗಾಲ ಎದುರಾಗಿದೆ. ಹಸಿಬರ ಹಾಗೂ ಒಣಬರ ಎರಡೂ ಪರಿಸ್ಥಿತಿಗಳು ನಿರ್ಮಾಣವಾಗಿದ್ದರೂ ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಶಿಗ್ಗಾಂವ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಬಳಿಕ ಮಾತನಾಡಿದ ಅವರು, ಮುಂಗಾರು ಮಳೆಯನ್ನು ನಂಬಿ ರೈತರು ಬಿತ್ತಿದ್ದ ಬೀಜ ಹಾಗೂ ಹಾಕಿದ್ದ ಗೊಬ್ಬರ ನಷ್ಟವಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆಯೂ ಎದುರಾಗಿದೆ ಎಂದು ಹೇಳಿದರು.

ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಜನವರಿ ಹಾಗೂ ಫೆಬ್ರವರಿಯಲ್ಲಿ ಕುಡಿಯುವ ನೀರಿಗೂ ತೀವ್ರ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿಗಳು ಕೇವಲ ವಿಡಿಯೋ ಕಾನ್ಫರೆನ್ಸ್ ಮೂಲಕ ಬರ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು, ಸಚಿವರು, ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಬೇಕು ಎಂದು ಆಗ್ರಹಿಸಿದರು.

ಕುಡಿಯುವ ನೀರು ಹಾಗೂ ತುರ್ತು ಕಾಮಗಾರಿಗಳಿಗಾಗಿ ಪ್ರತಿ ತಾಲೂಕಿಗೆ 10 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು. ಮೇವು ಬೆಳೆಸಲು ಹಾಗೂ ದೂರದ ಪ್ರದೇಶಗಳಿಂದ ಮೇವು ಸಾಗಿಸಲು ಪ್ರತಿ ತಾಲೂಕಿಗೆ ಮತ್ತೊಂದು 10 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಜೀ ರಾಮ್‌ಜಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ಪ್ರತಿದಿನ 150 ಜನರಿಗೆ ಕೂಲಿ ನೀಡುವುದರ ಜೊತೆಗೆ ಉತ್ತಮ ಕಾಮಗಾರಿಗಳನ್ನು ಕೈಗೊಳ್ಳಬಹುದು. ಆದರೆ ಸರ್ಕಾರದ ಬಳಿ ಈ ಬಗ್ಗೆ ಯಾವುದೇ ಸ್ಪಷ್ಟ ಪರಿಕಲ್ಪನೆ ಇಲ್ಲ ಎಂದು ಟೀಕಿಸಿದರು.

ಇದೇ ವೇಳೆ ಶಿಗ್ಗಾಂವ ತಾಲೂಕಿನಲ್ಲಿ ನಿರ್ಮಿಸಲಾಗಿರುವ ದೊಡ್ಡ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಜನರಿಗೆ ಸಮರ್ಪಕ ಚಿಕಿತ್ಸೆ ಸಿಗುತ್ತಿಲ್ಲ ಎಂದು ಬೊಮ್ಮಾಯಿ ಹೇಳಿದರು. 100 ಹಾಸಿಗೆಗಳ ಆಸ್ಪತ್ರೆಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ವೈದ್ಯಕೀಯ ಉಪಕರಣಗಳನ್ನು ಕೂಡಲೇ ಒದಗಿಸಬೇಕು ಎಂದು ಒತ್ತಾಯಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img