ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಕಳೆದ ಆರು ತಿಂಗಳಿಂದ ಲೈಂಗಿಕ ಕಿರುಕುಳನೀಡುತ್ತಿದ್ದಾರೆ ಎಂದು ಆರೋಪಿಸಿ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ಮಹಿಳೆ ಮೇಘನಾ ಎಂಬುವವರು ದೂರು ನೀಡಿದ್ದಾರೆ.
ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆ ಎಫ್‌ಐಅರ್ ದಾಖಲು ಮಾಡಲಾಗಿದೆ. ಕಳೆದ 10 ತಿಂಗಳಿಂದ ಜೀನಿ ಕಂಪನಿಯಲ್ಲಿ ಸಂತ್ರಸ್ತ ಯುವತಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿ ಖಾಸಗಿ ಅಂಗಾಗಗಳನ್ನ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದರಂತೆ.
ಘಟನೆ ಸಂಬಂಧ ಯಾರಿಗಾದರು ವಿಚಾರ ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದರು ಎಂದು ಜೀನಿ ಕಂಪನಿಯ ಮಾಲೀಕನ ವಿರುದ್ಧ ಸಂತ್ರಸ್ತ ಯುವತಿ ಆರೋಪ ಮಾಡಿ ದೂರು ನೀಡಿದ್ದಾರೆ. ಸಂತ್ರಸ್ತ ಯುವತಿ ಕೊಟ್ಟ ದೂರಿನ ಮೇರೆಗೆ ಕಳ್ಳಂಬೆಳ್ಳ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.